Mysore University Recruitment: ಎಂಎ ಆಗಿದ್ರೆ ಮೈಸೂರು ವಿವಿಯಲ್ಲಿದೆ ಉದ್ಯೋಗ; ಬೇಗ ಅರ್ಜಿ ಸಲ್ಲಿಸಿ

ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮೈಸೂರು ವಿಶ್ವವಿದ್ಯಾಲಯ

ಮೈಸೂರು ವಿಶ್ವವಿದ್ಯಾಲಯ

  • Share this:
    ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ (Mysore University Recruitment) ವಿವಿಧ ಜೂನಿಯರ್​ ರಿಸರ್ಚ್​ ಫೆಲೋ (Junior Research Fellow) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎನ್​ಸಿಇಆರ್​ಟಿಯ ಸಂಶೋಧನೆಯಲ್ಲಿ ಯೋಜನೆ ಸಂಬಂಧ ಕಾರ್ಯ ನಿರ್ವಹಣೆಗೆ ಈ ಅರ್ಜಿ ಆಹ್ವಾನಿಸಲಾಗಿದೆ. ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 13 ಆಗಿದೆ.

    ಪರಿಶಿಷ್ಟ ಪಂಗಡ, ಬುಡಕಟ್ಟು ಮಕ್ಕಳ ಶಿಕ್ಷಣ ವಿಚಾರದಲ್ಲಿ ಈ ಸಂಶೋಧನೆ ನಡೆಯಲಿದೆ. ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಅವಧಿ ಒಂದು ವರ್ಷದ ಗುತ್ತಿಗೆ ಆಧಾರಿತವಾಗಿದೆ. ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ಜೊತೆಗೆ ಫೀಲ್ಡ್​ ವರ್ಕ್​ನಲ್ಲಿ ಟಿಎ, ಡಿಎ ಕೂಡ ನೀಡಲಾಗುವುದು. ಈ ಹುದ್ದೆ ಆಯ್ಕೆ, ನೇಮಕಾತಿ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ವಿಶ್ವವಿದ್ಯಾಲಯದ ಹೆಸರುಮೈಸೂರು ವಿಶ್ವವಿದ್ಯಾಲಯ
    ಹುದ್ದೆಜೂನಿಯರ್ ರಿಸರ್ಚ್ ಫೆಲೋ (JRF)
    ಹುದ್ದೆ ಸಂಖ್ಯೆನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳಮೈಸೂರು
    ವೇತನ25000 ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎ ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

    ಅನುಭವದ ವಿವರಗಳು
    ಅಭ್ಯರ್ಥಿಗಳು ಯಾವುದೇ ಸಂಶೋಧನಾ ಯೋಜನೆಯಲ್ಲಿ ಒಂದು ವರ್ಷದ ಸಂಶೋಧನಾ ಅನುಭವವನ್ನು ಹೊಂದಿರಬೇಕು.
    ನೆಟ್​ ಮತ್ತು ಸ್ಲೆಟ್​ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ

    ವಯೋಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳಿಗಿಂತ ಕಡಿಮೆಯಿರಬೇಕು.

    ವಯೋಮಿತಿ ಸಡಿಲಿಕೆ:
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 05 ವರ್ಷಗಳು

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ ವಿಧಾನ: ಆಫ್​ಲೈನ್​ ಮತ್ತು ಆನ್​ಲೈನ್​
    ಅರ್ಜಿ ಸಲ್ಲಿಕೆ ಇ ಮೇಲ್​ ವಿಳಾಸ: anthroedit@ymail.com

    ಪ್ರಮುಖ ದಿನಾಂಕ
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಜೂನ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: uni-mysore.ac.in

    ಇದನ್ನು ಓದಿ: ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ ಬೇಗ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

    D.C. ನಂಜುಂಡ, ಸೆಂಟರ್ ಫಾರ್ ಸೋಶಿಯಲ್ ಎಕ್ಸ್‌ಕ್ಲೂಷನ್ ಮತ್ತು ಇನ್‌ಕ್ಲೂಸಿವ್ ಪಾಲಿಸಿ (CSSEIP), ಹ್ಯುಮಾನಿಟೀಸ್ ಬ್ಲಾಕ್, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು – 570006
    Published by:Seema R
    First published: