Mysore University Recruitment: ಮೈಸೂರು ವಿವಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಎಂಎಸ್ಸಿ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 7 ಆಗಿದೆ.

ಮೈಸೂರು ವಿಶ್ವವಿದ್ಯಾಲಯ

ಮೈಸೂರು ವಿಶ್ವವಿದ್ಯಾಲಯ

  • Share this:
    ಮೈಸೂರು ವಿಶ್ವವಿದ್ಯಾಲಯದಲ್ಲಿ (Mysore University) ವಿವಿಧ ಹುದ್ದೆಗೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸಿಸ್ಟೆಂಟ್ (Project Assistant), ಫೀಲ್ಡ್ ಇನ್ವೆಸ್ಟಿಗೇಟರ್ (Field Investigator) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಂಎಸ್ಸಿ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 7 ಆಗಿದೆ.

    ಇನ್ನು ಈ ಹುದ್ದೆಯೂ ಗುತ್ತಿಗೆ ಆಧಾರಿತವಾಗಿದೆ. ಪ್ರಾಜೆಕ್ಟ್ ಅಸಿಸ್ಟೆಂಟ್​ ಹುದ್ದೆ ಒಂದು ವರ್ಷದ ಅವಧಿ ಹೊಂದಿದ್ದರೆ, ಫೀಲ್ಡ್​ ಇನ್ವಸ್ಟಿಗೇಟರ್​ ಹುದ್ದೆ ಆರು ತಿಂಗಳ ಅವಧಿ ಹುದ್ದೆ ಆಗಿದೆ. ಈ ಹುದ್ದೆ ಆಯ್ಕೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರಗಳು ಈ ಕೆಳಗಿನಂತಿದೆ.

    ವಿಶ್ವವಿದ್ಯಾಲಯದ ಹೆಸರು: ಮೈಸೂರು ವಿಶ್ವವಿದ್ಯಾಲಯ
    ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್, ಫೀಲ್ಡ್ ಇನ್ವೆಸ್ಟಿಗೇಟರ್
    ಹುದ್ದೆಗಳ ಸಂಖ್ಯೆ: 2
    ಉದ್ಯೋಗ ಸ್ಥಳ: ಮೈಸೂರು - ಕರ್ನಾಟಕ
    ಸಂಬಳ: 15000-16000 ರೂ. ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಪ್ರಾಜೆಕ್ಟ್ ಅಸಿಸ್ಟೆಂಟ್1: ಎಂಎಸ್ಸಿ, ಎಂಫಿಲ್, ಸ್ನಾತಕೋತ್ತರ ಪದವಿ, ಸೈಕಾಲಜಿ/ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್‌ನಲ್ಲಿ ಪಿಎಚ್‌ಡಿ16000 ರೂ ಮಾಸಿಕ
    ಕ್ಷೇತ್ರ ತನಿಖಾಧಿಕಾರಿ1ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ15000 ರೂ ಮಾಸಿಕ

    ವಯಸ್ಸಿನ ಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ  ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಇದನ್ನು ಓದಿ: ಜವಾಹರಲಾಲ್ ನೆಹರು​ ಸೈಂಟಿಫಿಕ್​ ರಿಸರ್ಚ್​​ ಸೆಂಟರ್​ನಲ್ಲಿದೆ ಉದ್ಯೋಗ; ಇಲ್ಲಿದೆ ವಿವರ

    ವಯಸ್ಸಿನ ಸಡಿಲಿಕೆ:
    ಮೈಸೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಶೈಕ್ಷಣಿಕ ಸಾಧನೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಜೂನ್​​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಜುಲೈ 2022

    ಇದನ್ನು ಓದಿ: ಬಿಎಂಟಿಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ

    ಅಧಿಕೃತ ವೆಬ್​ಸೈಟ್​: uni-mysore.ac.in

    ಅರ್ಜಿ ಸಲ್ಲಿಕೆ ವಿಧಾನ

    -ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
    -ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ಪೋಟೋ ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.
    -ಅಭ್ಯರ್ಥಿಗಳು ತಮ್ಮ ಎಲ್ಲಾ ವಿವರಗಳನ್ನು ಒಳಗೊಂಡ ಅರ್ಜಿಯ ಸಾಫ್ಟ್​ ಮತ್ತು ಹಾರ್ಡ್​ ಕಾಪಿಯನ್ನು ಕೆಳಕಂಡ ವಿಳಾಸಕ್ಕೆ ಜುಲೈ 7ಕ್ಕೆ ಮುನ್ನವೇ ತಲುಪಿಸಬೇಕು.
    ಅರ್ಜಿಯನ್ನು ಸಲ್ಲಿಸುವ ವಿಳಾಸ

    ಡಾ. ಜ್ಯೋತಿ ಎಚ್.ಪಿ., ಸಹ ಪ್ರಾಧ್ಯಾಪಕರು ಮತ್ತು ಯೋಜನಾ ನಿರ್ದೇಶಕರು, ಸಮಾಜಕಾರ್ಯ ಅಧ್ಯಯನ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು – 570006
    Published by:Seema R
    First published: