Jobs in Mysore University: ಮೈಸೂರು ವಿವಿಯಲ್ಲಿ ನೇಮಕಾತಿ; ಸಮಾಜ ವಿಜ್ಞಾನದಲ್ಲಿ ಎಂಎ ಆಗಿದ್ರೆ ಅರ್ಜಿ ಸಲ್ಲಿಸಿ

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. 

ಮೈಸೂರು ವಿಶ್ವವಿದ್ಯಾಲಯ

ಮೈಸೂರು ವಿಶ್ವವಿದ್ಯಾಲಯ

  • Share this:
    ಮೈಸೂರು ವಿಶ್ವ ವಿದ್ಯಾಲಯದಲ್ಲಿ (Mysore University) ಸಂಶೋಧಕರ (Research) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 2 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ವಿಶ್ವವಿದ್ಯಾಲಯದ ಹೆಸರು: ಮೈಸೂರು ವಿಶ್ವವಿದ್ಯಾಲಯ
    ಹುದ್ದೆಯ ಹೆಸರು: ಸಂಶೋಧನಾ ಸಹಾಯಕ, ಫೀಲ್ಡ್ ಇನ್ವೆಸ್ಟಿಗೇಟರ್
    ಹುದ್ದೆಗಳ ಸಂಖ್ಯೆ: 02
    ಉದ್ಯೋಗ ಸ್ಥಳ: ಮೈಸೂರು
    ವೇತನ: 15000-16000ರೂ. ಪ್ರತಿ ತಿಂಗಳು


















    ಹುದ್ದೆಹುದ್ದೆ ಸಂಖ್ಯೆವೇತನ
    ಸಂಶೋಧನಾ ಸಹಾಯಕ116000 ರೂ ವೇತನ
    ಕ್ಷೇತ್ರ ತನಿಖಾಧಿಕಾರಿ115000 ರೂ ವೇತನ

    ಶೈಕ್ಷಣಿಕ ಅರ್ಹತೆ: ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಇದನ್ನು ಓದಿ: ರಕ್ಷಣಾ ಸಚಿವಾಲಯದಲ್ಲಿ ಸ್ಟೆನೋ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ನೇಮಕಾತಿ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ
    ಶೈಕ್ಷಣಿಕ ಸಾಧನೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಆಗಸ್ಟ್​ ​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಸೆಪ್ಟೆಂಬರ್​ 2022

    ಇದನ್ನು ಓದಿ: ಕೆನರಾ ಬ್ಯಾಂಕ್​ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ಕೆಲಸ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: uni-mysore.ac.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಅರ್ಜಿ ರವಾನಿಸಿ.
    Published by:Seema R
    First published: