Indian Railway Recruitment 2021: 8ನೇ ತರಗತಿ, SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

ನವೆಂಬರ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
NAPS Southern Railway Recruitment 2021: ನ್ಯಾಷನಲ್ ಅಪ್ರೆಂಟಿಸ್​ಶಿಪ್​ ಪ್ರೊಮೊಶನ್ ಸ್ಕೀಂ ದಕ್ಷಿಣ ರೈಲ್ವೆ(National Apprenticeship Promotion Scheme Southern Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ವೈರ್​ಮ್ಯಾನ್(Wireman)​, ಕಂಪ್ಯೂಟರ್ ಆಪರೇಟರ್(Computer Operator) ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್(Programming Assistant) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 8ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ apprenticeshipindia.org ಗೆ ಭೇಟಿ ನೀಡಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನ್ಯಾಷನಲ್ ಅಪ್ರೆಂಟಿಸ್​ಶಿಪ್​ ಪ್ರೊಮೊಶನ್ ಸ್ಕೀಂ ದಕ್ಷಿಣ ರೈಲ್ವೆ
ಹುದ್ದೆಯ ಹೆಸರುವೈರ್​ಮ್ಯಾನ್​, ಕಂಪ್ಯೂಟರ್ ಆಪರೇಟರ್, ಪ್ರೋಗ್ರಾಮಿಂಗ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು20
ವಿದ್ಯಾರ್ಹತೆ10ನೇ ತರಗತಿ, 8ನೇ ತರಗತಿ ಪಾಸ್
ಉದ್ಯೋಗದ ಸ್ಥಳಚೆನ್ನೈ
ವೇತನಮಾಸಿಕ ₹ 5,000-7,000
ಅರ್ಜಿ ಸಲ್ಲಿಸುವ ಬಗೆಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ27/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30/11/2021ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021

UPPSC Recruitment 2021: ಮಾಸಿಕ ವೇತನ ₹ 1,77,500; UPPSCಯಲ್ಲಿ ವಿವಿಧ ಹುದ್ದೆಗಳು ಖಾಲಿ

ಹುದ್ದೆಯ ಮಾಹಿತಿ
ವೈರ್​ಮ್ಯಾನ್​- 10
ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್-10
ಒಟ್ಟು-20 ಹುದ್ದೆಗಳು

ವಿದ್ಯಾರ್ಹತೆ:
ವೈರ್​ಮ್ಯಾನ್​- 8ನೇ ತರಗತಿ ಪಾಸ್
ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್-10ನೇ ತರಗತಿ ಪಾಸ್

ಉದ್ಯೋಗದ ಸ್ಥಳ:
ವೈರ್​ಮ್ಯಾನ್​, ಕಂಪ್ಯೂಟರ್ ಆಪರೇಟರ್, ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈನಲ್ಲಿ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ: Police Recruitment 2021: ತಿಂಗಳಿಗೆ ₹ 22,000 ಸಂಬಳ, ಡಿಪ್ಲೋಮಾ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ

ವೇತನ:
ವೈರ್​ಮ್ಯಾನ್​, ಕಂಪ್ಯೂಟರ್ ಆಪರೇಟರ್, ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 5,000-7,000 ವೇತನ ನೀಡಲಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: