• Home
  • »
  • News
  • »
  • jobs
  • »
  • NCERT Recruitment: ಎನ್​ಸಿಆರ್​ಟಿಇಯಲ್ಲಿ ನೇಮಕಾತಿ; ಮೈಸೂರಿನಲ್ಲಿ ಕೆಲಸ

NCERT Recruitment: ಎನ್​ಸಿಆರ್​ಟಿಇಯಲ್ಲಿ ನೇಮಕಾತಿ; ಮೈಸೂರಿನಲ್ಲಿ ಕೆಲಸ

NCERT

NCERT

ಮೈಸೂರು, ದೆಹಲಿ ಸೇರಿದಂತೆ ವಿವಿಧ ಕಡೆಗಳ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • Share this:

    ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್​ನಲ್ಲಿ (National Council of Educational Research and Training) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಪ್ರೊಫೆಸರ್​, ಲೈಬ್ರರಿಯನ್​ ಸೇರಿದಂತೆ ಒಟ್ಟು 292 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು, ದೆಹಲಿ ಸೇರಿದಂತೆ ವಿವಿಧ ಕಡೆಗಳ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 28 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್​
    ಹುದ್ದೆಯ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್
    ಹುದ್ದೆಗಳ ಸಂಖ್ಯೆ: 292
    ಉದ್ಯೋಗ ಸ್ಥಳ: ನವದೆಹಲಿ - ಅಜ್ಮೀರ್ - ಭುವನೇಶ್ವರ - ಮೈಸೂರು
    ವೇತನ: 57700-144200 ರೂ ಪ್ರತಿ ತಿಂಗಳು

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಪ್ರೊಫೆಸರ್39ಪಿಎಚ್​ಡಿ
    ಅಸೋಸಿಯೇಟ್ ಪ್ರೊಫೆಸರ್97ಪಿಎಚ್​ಡಿ
    ಸಹಾಯಕ ಪ್ರಾಧ್ಯಾಪಕ153ಪಿಎಚ್​ಡಿ
    ಲೈಬ್ರರಿಯನ್​​1ಲೈಬ್ರರಿ ಸೈನ್ಸ್​ನಲ್ಲಿ ಪದವಿ, ಪಿಎಚ್​ಡಿ
    ಸಹಾಯಕ ಲೈಬ್ರರಿಯನ್​​2ಲೈಬ್ರರಿ ಸೈನ್ಸ್​ನಲ್ಲಿ ಪದವಿ, ಪಿಎಚ್​ಡಿ

    ವಯಸ್ಸಿನ ಮಿತಿ: ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಮತ್ತು ಟ್ರೈನಿಂಗ್ ನೇಮಕಾತಿ ಅಧಿಸೂಚನೆಯ ಪ್ರಕಾರ  ವಯಸ್ಸಿನ ಮಿತಿಯನ್ನು ಹೊಂದಿರಬೇಕು


    ಇದನ್ನು ಓದಿ: ಭಾರತೀಯ ಸೇನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆ ನೇಮಕಾತಿ


    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ ನಿಯಮಗಳ ಪ್ರಕಾರ


    ಅರ್ಜಿ ಸಲ್ಲಿಕೆ: ಆನ್​ಲೈನ್​


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ವಿಕಲಚೇತನ  ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 1000 ರೂ


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಅಕ್ಟೋಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಅಕ್ಟೋಬರ್ 2022


    ಇದನ್ನು ಓದಿ:  ಡಾಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ncert.nic.in


    ಅರ್ಜಿ ಸಲ್ಲಿಕೆ ಪ್ರಕ್ರಿಯೆ 


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: