• Home
 • »
 • News
 • »
 • jobs
 • »
 • NHAI Recruitment: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿದೆ ಹುದ್ದೆ; ಸಿವಿಲ್​ ಇಂಜಿನಿಯರ್​ ಆದವರಿಗೆ ಅವಕಾಶ

NHAI Recruitment: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿದೆ ಹುದ್ದೆ; ಸಿವಿಲ್​ ಇಂಜಿನಿಯರ್​ ಆದವರಿಗೆ ಅವಕಾಶ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮತ್ತು ಆಫ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 7 ಆಗಿದೆ.

 • Share this:

  ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (National Highways Authority of India)  ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್​ ಮತ್ತು ಹಿಂದಿ ಅಧಿಕಾರಿಗಳು (Manger and Hindi Officer) ಸೇರಿದಂತೆ 37 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್​ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮತ್ತು ಆಫ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 7 ಆಗಿದೆ.


  ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


  ಸಂಸ್ಥೆಯ ಹೆಸರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)
  ಹುದ್ದೆಯ ಹೆಸರು: ಮ್ಯಾನೇಜರ್, ಹಿಂದಿ ಅಧಿಕಾರಿ
  ಹುದ್ದೆಗಳ ಸಂಖ್ಯೆ: 37
  ಉದ್ಯೋಗ ಸ್ಥಳ: ಅಖಿಲ ಭಾರತ
  ವೇತನ: 15600-208700 ರೂ. ಪ್ರತಿ ತಿಂಗಳು

  ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
  ಮ್ಯಾನೇಜರ್ (ತಾಂತ್ರಿಕ)36ಸಿವಿಲ್​ ಇಂಜಿನಿಯರಿಂಗ್​ ಪದವಿ67700-208700 ರೂ ಮಾಸಿಕ
  ಹಿಂದಿ ಅಧಿಕಾರಿ1ಹಿಂದಿಯಲ್ಲಿ ಸ್ನಾತಕೋತ್ತರ ಪದವಿ15600-39100 ರೂ ಮಾಸಿಕ

  ವಯಸ್ಸಿನ ಮಿತಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು.


  ಇದನ್ನು ಓದಿ: 250 ಪಶು ವೈದ್ಯಕೀಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಹುದ್ದೆ ಮಾಹಿತಿ


  ವಯೋಮಿತಿ ಸಡಿಲಿಕೆ:
  ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ಪ್ರಕಾರ


  ಅರ್ಜಿ ಸಲ್ಲಿಕೆ: ಆನ್​ಲೈನ್​ ಮತ್ತು ಆಫ್​ಲೈನ್​


  ಅರ್ಜಿ ಶುಲ್ಕ: ವಿನಾಯಿತಿ


  ಆಯ್ಕೆ ಪ್ರಕ್ರಿಯೆ
  ಲಿಖಿತ ಪರೀಕ್ಷೆ ಮತ್ತು ಸಂದರ್ಶನ


  ಅರ್ಜಿ ಸಲ್ಲಿಕೆ ವಿಳಾಸ
  DGM (HR & Admn.)-IB, ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ: G-5 & 6, ಸೆಕ್ಟರ್-10, ದ್ವಾರಕಾ, ನವದೆಹಲಿ - 110075


  ಇದನ್ನು ಓದಿ: 1535​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಐಟಿಐ, ಡಿಪ್ಲೊಮಾ ಆದವರಿಗೆ ಅವಕಾಶ


  ಪ್ರಮುಖ ದಿನಾಂಕಗಳು
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್​​ 2022
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ನವೆಂಬರ್ 2022


  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: nhai.gov.in


  ಅರ್ಜಿ ಸಲ್ಲಿಕೆ ವಿಧಾನ


  ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.


  ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ


  ಅರ್ಜಿ ಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.


  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಿ

  Published by:Seema R
  First published: