NBAIR Recruitment 2022: ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್(National Bureau of Agricultural Insect Resources) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಯಂಗ್ ಪ್ರೊಫೆಶನಲ್-I (Young Professional) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿ(Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 8ರಂದು ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ |
ಹುದ್ದೆ | ಯಂಗ್ ಪ್ರೊಫೆಶನಲ್-I |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 25,000 |
ಉದ್ಯೋಗದ ಸ್ಥಳ | ಬೆಂಗಳೂರು |
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: JOBS: ರಾಮನಗರದಲ್ಲಿ ಫೀಲ್ಡ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ, ತಿಂಗಳಿಗೆ ₹ 28,000 ಸಂಬಳ
ವಯೋಮಿತಿ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್ನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ: JOBS: ಮಂಗಳೂರು ಪೋರ್ಟ್ನಲ್ಲಿ ಕೆಲಸ ಖಾಲಿ ಇದೆ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ, ಸಂಬಳ 1.40 ಲಕ್ಷ
ICAR-ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್,
P. ಬ್ಯಾಗ್ ನಂ. 2491,
H.A. ಫಾರ್ಮ್ ಪೋಸ್ಟ್,
ಬಳ್ಳಾರಿ ರಸ್ತೆ,
ಬೆಂಗಳೂರು - 560024
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/11/2022
ಸಂದರ್ಶನ ನಡೆಯುವ ದಿನಾಂಕ: 08/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ