ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (National Buildings Construction Corporation) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚುವರಿ ಜನರಲ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಹಾಗೂ ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 16 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (NBCC)
ಹುದ್ದೆಗಳ ಸಂಖ್ಯೆ: 16
ಉದ್ಯೋಗ ಸ್ಥಳ: ಅಖಿಲ ಭಾರತ
ಪೋಸ್ಟ್ ಹೆಸರು: ಹೆಚ್ಚುವರಿ ಜನರಲ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ
ವೇತನ: ರೂ.24640-220000 ರೂ ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಸ್ಥೆ |
ವಿದ್ಯಾರ್ಹತೆ |
ವಯೋಮಿತಿ |
ಹೆಚ್ಚುವರಿ ಜನರಲ್ ಮ್ಯಾನೇಜರ್ |
6 |
ಸಿವಿಲ್ ಇಂಜಿನಿಯರಿಂಗ್ |
45 ವರ್ಷ ಗರಿಷ್ಠ |
ಮ್ಯಾನೇಜ್ಮೆಂಟ್ ಟ್ರೈನಿ |
9 |
ಎಂಬಿಎ, ಎಂಎಸ್ಡಬ್ಲ್ಯೂ |
29 ವರ್ಷ ಗರಿಷ್ಠ |
ಸೀನಿಯರ್ ಸ್ಟೆನೋಗ್ರಾಫರ್ |
1 |
ಪದವಿ |
28 ವರ್ಷ ಗರಿಷ್ಠ |
ವಯೋಮಿತಿ ಸಡಿಲಿಕೆ:
ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಈ ಶುಲ್ಕ ಅನ್ವಯವಾಗಲಿದೆ
ಸೀನಿಯರ್ ಸ್ಟೆನೋಗ್ರಾಫರ್: ಹುದ್ದೆಗೆ ಯಾವುದೇ ಶುಲ್ಕ ಇರುವುದಿಲ್ಲ
ಮ್ಯಾನೇಜ್ಮೆಂಟ್ ಟ್ರೈನಿ: 500 ರೂ
ಹೆಚ್ಚುವರಿ ಜನರಲ್ ಮ್ಯಾನೇಜರ್: 1000 ರೂ
ಇದನ್ನು ಓದಿ: ಎಸ್ಎಸ್ಎಲ್ಸಿ, ಪಿಯುಸಿ ಆದವರಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ ಅವಕಾಶ
ಅರ್ಜಿ ಶುಲ್ಕ ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
CBT, ಕೌಶಲ್ಯ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ಹುದ್ದೆಯ ವೇತನ
ಹೆಚ್ಚುವರಿ ಜನರಲ್ ಮ್ಯಾನೇಜರ್ ಹುದ್ದಗೆ ಮಾಸಿಕ 80000-220000 ರೂ
ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ 40000-140000ರೂ ಮಾಸಿಕ
ಸೀನಿಯರ್ ಸ್ಟೆನೋಗ್ರಾಫರ್ ಹುದ್ದೆಗೆ ಮಾಸಿಕ 24640 ರೂ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 17, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಜೂನ್, 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
nbccindia.in
ಇದನ್ನು ಓದಿ: ಡಿಪ್ಲೋಮಾ, ಬಿಎಸ್ಸಿ ಪದವೀಧರರಿಗೆ ಸುವರ್ಣಾವಕಾಶ; ಬೆಂಗಳೂರಿನ ಐಐಐಟಿಯಲ್ಲಿ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ವಿಧಾನ
- ಎನ್ಬಿಸಿಸಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ. ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
- ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
-ನಿಗದಿ ಹುದ್ದೆ ಮುಂದೆ ಆನ್ ಲೈನ್ ಅರ್ಜಿ ಸಲ್ಲಿಕೆ ಬಟ್ ಕ್ಲಿಕ್ ಮಾಡಿ.
ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ -ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
-ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೆರೆ ಹಿಡಿಯಿರಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ