NCBS Recruitment: ಬೆಂಗಳೂರಿನ ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ನೇಮಕಾತಿ; ತಿಂಗಳಿಗೆ 48ಸಾವಿರ ರೂ ವೇತನ

ಈ ಹುದ್ದೆಯೂ ಗುತ್ತಿಗೆ ಆಧಾರಿತವಾಗಿದ್ದು, ಹಿಂದುಳಿದ ವರ್ಗಗಳಿಗೆ ಮೀಸಲಾಗಿದೆ. ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ನಡೆಯಲಿದೆ.

ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ

ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ

  • Share this:
    ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ (National Centre For Biological Sciences) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ತಾಂತ್ರಿಕ ಸಹಾಯಕ (ಸಿವಿಲ್) ಹುದ್ದೆಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಆನ್​ಲೈನ್​ ಹಾಗೂ ಆಫ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 4 ಆಗಿದೆ.

    ಈ ಹುದ್ದೆಯೂ ಗುತ್ತಿಗೆ ಆಧಾರಿತವಾಗಿದ್ದು, ಹಿಂದುಳಿದ ವರ್ಗಗಳಿಗೆ ಮೀಸಲಾಗಿದೆ. ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ನಡೆಯಲಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ (NCBS)
    ಹುದ್ದೆತಾಂತ್ರಿಕ ಸಹಾಯಕ (ಸಿವಿಲ್)
    ಒಟ್ಟು ಹುದ್ದೆಗಳುನಿರ್ಧಿಷ್ಟ ಪಡಿಸಿಲ್ಲ
    ಉದ್ಯೋಗ ಸ್ಥಳಬೆಂಗಳೂರು
    ವೇತನ48500 ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 60% ಅಂಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  31 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ಸೇನೆಯಲ್ಲಿ ಅಗ್ನಿವೀರರ ನೇಮಕಾತಿ; ಇಲ್ಲಿದೆ ಹುದ್ದೆಯ ಸಂಪೂರ್ಣ ವಿವರ

    ವಯೋಮಿತಿ ಸಡಿಲಿಕೆ:
    ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದ ನಿಯಮಗಳ ಪ್ರಕಾರ

    ಅರ್ಜಿ ಸಲ್ಲಿಕೆ: ಆನ್​ಲೈನ್​ ಮತ್ತು ಆಫ್​​ಲೈನ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-06-2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 04-ಜುಲೈ-2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ncbs.res.in

    ಇದನ್ನು ಓದಿ: ಬೆಳಗಾವಿಯ ಸೇನಾ ಶಾಲೆಗೆ​​ ನೇಮಕಾತಿ; ಪಿಯುಸಿ ಆಗಿದ್ರೆ ಸಾಕು

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ  ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

    ಅರ್ಜಿ ಸಲ್ಲಿಸಬೇಕಾದ ವಿಳಾಸ

    ಮುಖ್ಯಸ್ಥರು, ಆಡಳಿತ ಮತ್ತು ಹಣಕಾಸು, ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್, GKVK ಪೋಸ್ಟ್, ಬಳ್ಳಾರಿ ರಸ್ತೆ, ಬೆಂಗಳೂರು - 560065
    Published by:Seema R
    First published: