• Home
  • »
  • News
  • »
  • jobs
  • »
  • NCDC Recruitment: ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಲ್ಲಿ ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಆಹ್ವಾನ

NCDC Recruitment: ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಲ್ಲಿ ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಆಹ್ವಾನ

ಆರ್ಜಿ ಸಲ್ಲಿಸಿ

ಆರ್ಜಿ ಸಲ್ಲಿಸಿ

ಈ ಹುದ್ದೆಗಳನ್ನು ಮೂರು ವರ್ಷಗಳ ಕಾಲ ಒಪ್ಪಂದದ ಅವಧಿ ಮೇರೆಗೆ ನೇಮಕ ಮಾಡಲಾಗುತ್ತಿದೆ.

  • Share this:

    ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಲ್ಲಿ(National Cooperative Development Corporation ವಿವಿಧ ) ಭರ್ತಿಗೆ ಅಧಿಸೂಚನೆ ಹೊರಡಸಿಲಾಗಿದೆ. ಪ್ರೊಫೆಷನಲ್​, ಕನ್ಸಲ್ಟೆಂಟ್​ ಮತ್ತು ಯುವ ವೃತ್ತಿಪರ ಸೇರಿದಂತೆ ಒಟ್ಟು 52 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 31 ಆಗಿದೆ.


    ಈ ಹುದ್ದೆಗಳನ್ನು ಮೂರು ವರ್ಷಗಳ ಕಾಲ ಒಪ್ಪಂದದ ಅವಧಿ ಮೇರೆಗೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC)
    ಹುದ್ದೆಯ ಹೆಸರುಯಂಗ್ ಪ್ರೊಫೆಷನಲ್, ಕನ್ಸಲ್ಟೆಂಟ್
    ಹುದ್ದೆಗಳ ಸಂಖ್ಯೆ52
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ:ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ ನಿಯಮಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪತ್ರಿಕೋದ್ಯಮದಲ್ಲಿ ಎಂಎ, ಎಂಕಾಂ, ಸಿಎ ಅಥವಾ ಐಸಿಡಬ್ಲ್ಯೂಎ, ಎಂಬಿಎ ಪದವಿಯನ್ನು ಪಡೆದಿರಬೇಕು.


    ಇದನ್ನು ಓದಿ: ಮನಶಾಸ್ತ್ರದಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ; ಮಾಸಿಕ 88000 ರೂ ವರೆಗೆ ವೇತನ


    ವಯಸ್ಸಿನ ಮಿತಿ: ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಟ 21 ರಿಂದ ಗರಿಷ್ಟ 55 ವರ್ಷ ವಯೋಮಿತಿ ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ನಿಯಮಗಳ ಪ್ರಕಾರ


    ಅರ್ಜಿ ಸಲ್ಲಿಕೆ : ಇಮೇಲ್​


    ಇಮೇಲ್​ ವಿಳಾಸ: career@ncdc.in


    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 27 ಸೆಪ್ಟೆಂಬರ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 31 ಅಕ್ಟೋಬರ್​​ 2022


    ಇದನ್ನು ಓದಿ: ವಿಜಯನಗರ ಡಿಸಿ ಕಚೇರಿಯಲ್ಲಿದೆ ಹುದ್ದೆ; ಇಲ್ಲಿದೆ ಸಂಪೂರ್ಣ ಮಾಹಿತಿ


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ncdc.in


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್​ ವಿಳಾಸಕ್ಕೆ ಅರ್ಜಿ ಸಲ್ಲಿಸಿ.

    Published by:Seema R
    First published: