NCDIR Recruitment 2021: ಮಾಸಿಕ ವೇತನ ₹ 32,000; ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರದಲ್ಲಿ ಉದ್ಯೋಗ

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲೇ ಕೆಲಸ ನೀಡಲಾಗುತ್ತದೆ.

NCDIR

NCDIR

  • Share this:
NCDIR Recruitment 2021: ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ(The National Centre for Disease Informatics and Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ಪ್ರೋಗ್ರಾಮರ್(Computer Programmer Posts) ಹುದ್ದೆಗಳು ಖಾಲಿ ಇದ್ದು, ಸ್ನಾತಕೋತ್ತರ ಪದವಿ(Master's Degree) ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇದೇ ಅಕ್ಟೋಬರ್ 21ರಿಂದ ನವೆಂಬರ್ 15ರವರೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗಾಂಕ್ಷಿಗಳು(Job Seekers) ಹೆಚ್ಚಿನ ಮಾಹಿತಿಗಾಗಿ NCDIRನ ಅಧಿಕೃತ ವೆಬ್​ಸೈಟ್ www.ncdirindia.orgಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ
ಜಾಹೀರಾತು ಸಂಖ್ಯೆNCDIR/Projects-Rec/10/2021-22
ಹುದ್ದೆಯ ಹೆಸರುಕಂಪ್ಯೂಟರ್ ಪ್ರೋಗ್ರಾಮರ್
ಒಟ್ಟು ಹುದ್ದೆ01
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳಬೆಂಗಳೂರು
ಸಂಬಳಮಾಸಿಕ ₹32,000
ವಯೋಮಿತಿ30 ವರ್ಷ
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ21/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15/11/2021ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/11/2021

ಇದನ್ನೂ ಓದಿ:BHEL Recruitment 2021: ತಿಂಗಳಿಗೆ ₹ 80,000 ಸಂಬಳ; ಯುವ ವೃತ್ತಿಪರ ಹುದ್ದೆಗೆ ಅರ್ಜಿ ಆಹ್ವಾನಿಸಿದ BHEL

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಆಯ್ಕೆ ಮಾಡುವ ಅಭ್ಯರ್ಥಿಗೆ ಯಾವುದೇ ಪರೀಕ್ಷೆ ನಡೆಸಲಾಗುವುದಿಲ್ಲ.
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ ಇರುತ್ತದೆ.

ಸಂಬಳ:

ಕಂಪ್ಯೂಟರ್​ ಪ್ರೋಗ್ರಾಮರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹32,000 ಸಂಬಳ ನೀಡಲಾಗುತ್ತದೆ.

ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 30 ವರ್ಷ ವಯಸ್ಸಾಗಿರಬೇಕು.

ವಿದ್ಯಾರ್ಹತೆ:

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಇದನ್ನೂ ಓದಿ:Karnataka High Court Recruitment 2021: ತಿಂಗಳಿಗೆ ₹ 63,070 ಸಂಬಳ; 21 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅಧಿಸೂಚನೆ ಪ್ರಕಟ

ಕೆಲಸದ ಸ್ಥಳ:

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲೇ ಕೆಲಸ ನೀಡಲಾಗುತ್ತದೆ.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: