NDRI Recruitment: ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿದೆ ಕೆಲಸ; ಪಿಯುಸಿ ಆಗಿದ್ರೆ ಸಾಕು

ಗುತ್ತಿಗೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರಿನ ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆ

ಬೆಂಗಳೂರಿನ ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆ

  • Share this:
    ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (National Dairy Research Institute) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಸಿನೆಸ್ ಮ್ಯಾನೇಜರ್, ಗುತ್ತಿಗೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಇ ಮೇಲ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 20 ಆಗಿದೆ.

    ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಕೆಳಗಿನಂತಿವೆ.




    ಸಂಸ್ಥೆಯ ಹೆಸರು: ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI)
    ಹುದ್ದೆಯ ಹೆಸರು: ವ್ಯಾಪಾರ ನಿರ್ವಾಹಕ, ಗುತ್ತಿಗೆ ಸಹಾಯಕ
    ಹುದ್ದೆಗಳ ಸಂಖ್ಯೆ: 2
    ಉದ್ಯೋಗ ಸ್ಥಳ: ಬೆಂಗಳೂರು
    ಸಂಬಳ: 22000-60000 ರೂ. ಪ್ರತಿ ತಿಂಗಳು
























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ವ್ಯಾಪಾರ ನಿರ್ವಾಹಕ1ಎಂಬಿಎ, ಪಿಜಿಡಿಎಂಗರಿಷ್ಠ 40 ವರ್ಷ60000 ರೂ ಮಾಸಿಕ
    ಒಪ್ಪಂದದ ಸಹಾಯಕ-I1ಪಿಯುಸಿಗರಿಷ್ಠ 45 ವರ್ಷ22000 ರೂ ಮಾಸಿಕ

    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ

    ಇದನ್ನು ಓದಿ: ಭಾರತೀಯ ರೈಲ್ವೆಯಲ್ಲಿ 60 ಹುದ್ದೆಗಳ ನೇಮಕಾತಿ; ಡಿಗ್ರಿ ಆದವರು ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ: ಇಮೇಲ್​ ಮೂಲಕ
    ಇಮೇಲ್​ ವಿಳಾಸ: aicsrsicarndrifoundation@gmail.com

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06 ಆಗಸ್ಟ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 20 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ndri.res.in

    ಇದನ್ನು ಓದಿ: ಧಾರವಾಡ ಕೃಷಿ ವಿವಿಯಲ್ಲಿ ನೇಮಕಾತಿ; ಮಾಸಿಕ 31 ಸಾವಿರ ರೂ ವೇತನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇ-ಮೇಲ್​ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: