NMPT Recruitment: ನವ ಮಂಗಳೂರು ಬಂದರಿನಲ್ಲಿದೆ ಉದ್ಯೋಗಾವಕಾಶ; ಮಾಸಿಕ 50 ಸಾವಿರ ರೂ ವೇತನ

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.

ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ನವ ಮಂಗಳೂರು ಬಂದರು ಮಂಡಳಿಯಲ್ಲಿ (New Mangalore Port Trust) ವೈದ್ಯಕೀಯ ಅಧಿಕಾರಿ (Medical Officer) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಎರಡು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 20 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆನವ ಮಂಗಳೂರು ಬಂದರು ಮಂಡಳಿ (NMPT)
    ಹುದ್ದೆವೈದ್ಯಕೀಯ ಅಧಿಕಾರಿ
    ಒಟ್ಟು ಹುದ್ದೆಗಳ ಸಂಖ್ಯೆ2
    ಕಾರ್ಯ ನಿರ್ವಹಣೆ ಸ್ಥಳಮಂಗಳೂರು
    ವೇತನ55000ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಬಿಎಸ್​ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಕ್ಕಿಂತ ಮೀರಿರಬಾರದು.

    ಇದನ್ನು ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ

    ವಯೋಮಿತಿ ಸಡಿಲಿಕೆ:
    ನವ ಮಂಗಳೂರು ಪೋರ್ಟ್ ಟ್ರಸ್ಟ್ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಜುಲೈ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಆಗಸ್ಟ್ 2022

    ಇದನ್ನು ಓದಿ: ಅಟಲ್​ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇದೆ 61 ಹುದ್ದೆ; ಬೇಗ ಅರ್ಜಿ ಸಲ್ಲಿಸಿ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: newmangaloreport.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: