NCL Recruitment: 481 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಡಿಗ್ರಿ, ಡಿಪ್ಲೊಮಾ ಆದವರಿಗೆ ಅವಕಾಶ

ಈ ಅಪ್ರೆಂಟಿಸ್​ ಹುದ್ದೆಗಳು ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಮಾತ್ರ ನೇಮಕ ನಡೆಸಲಾಗುತ್ತಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕೇಂದ್ರ ಸರ್ಕಾರದ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (Neyveli Lignite Corporation Limited) 481 ಅಪ್ರೆಂಟಿಸ್ (Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯಲ್ಲಿ ತಾಂತ್ರಿಕ ಮತ್ತು ಪದವೀಧರ ಅಪ್ರೆಂಟಿಸ್​​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅಪ್ರೆಂಟಿಸ್​ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್​ಲೈನ್ ಮತ್ತು ಆಫ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 24 ಆಗಿದೆ.

    ಈ ಅಪ್ರೆಂಟಿಸ್​ ಹುದ್ದೆಗಳು ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಮಾತ್ರ ನೇಮಕ ನಡೆಸಲಾಗುತ್ತಿದೆ. ಚೆನ್ನೈನಲ್ಲಿ ಕಾರ್ಯ ನಿರ್ವಹಿಸಲು ಇಚ್ಚೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC)
    ಹುದ್ದೆಯ ಹೆಸರು: ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ: 481
    ಉದ್ಯೋಗ ಸ್ಥಳ: ಚೆನ್ನೈ
    ಸ್ಟೈಪೆಂಡ್: 8766-15028 ರೂ ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಎಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ಗಳು201ಪದವಿ, ಬಿ.ಇ ಅಥವಾ ಬಿ.ಟೆಕ್15028 ರೂ ಮಾಸಿಕ
    ನಾನ್ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ಗಳು105ಬಿಕಾಂ, ಬಿಎಸ್ಸಿ, ಬಿಸಿಎ, ಬಿಬಿಎ12524 ರೂ ಮಾಸಿಕ
    ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್175ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಡಿಪ್ಲೊಮಾ12524 ರೂ ಮಾಸಿಕ

    ವಯಸ್ಸಿನ ಮಿತಿ: ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NLC ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಇದನ್ನು ಓದಿ: ಬೆಂಗಳೂರಿನ ಆಧಾರ್​ ಕೇಂದ್ರದಲ್ಲಿದೆ ಉದ್ಯೋಗಾವಕಾಶ

    ವಯಸ್ಸಿನ ಸಡಿಲಿಕೆ:
    ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಮೆರಿಟ್ ಪಟ್ಟಿ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಆಗಸ್ಟ್-2022
    ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31-ಆಗಸ್ಟ್-2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ - ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nlcindia.in

    ಇದನ್ನು ಓದಿ: ನಿರುದ್ಯೋಗಿಗಳಿಗೆ ಶುಭ ಸುದ್ದಿ; ಬಿಎಸ್​ಎನ್​ಎಲ್​ನಲ್ಲಿ 100 ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮತ್ತು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಕೆಳಗಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.

    ಅರ್ಜಿ ಸಲ್ಲಿಸಬೇಕಾದ ವಿಳಾಸ

    ಪ್ರಧಾನ ವ್ಯವಸ್ಥಾಪಕರ ಕಛೇರಿ, ಭೂ ಸ್ವಾಧೀನ ಇಲಾಖೆ, ಎನ್​ಎಲ್​ಸಿ ಇಂಡಿಯಾ ಲಿಮಿಟೆಡ್. ನೈವೇಲಿ - 607803, ತಮಿಳುನಾಡು
    Published by:Seema R
    First published: