NHB Recruitment 2021: ನ್ಯಾಷನಲ್ ಹೌಸಿಂಗ್ ಬ್ಯಾಂಕ್​ನಲ್ಲಿ ಪದವಿ ಆದವರಿಗೆ ಉದ್ಯೋಗ; ಮಾಸಿಕ ವೇತನ ₹ 89,890

ಡಿಸೆಂಬರ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 30, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್

ನ್ಯಾಷನಲ್ ಹೌಸಿಂಗ್ ಬ್ಯಾಂಕ್

  • Share this:
NHB Recruitment 2021:  ನ್ಯಾಷನಲ್ ಹೌಸಿಂಗ್ ಬ್ಯಾಂಕ್(National Housing Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಅಸಿಸ್ಟೆಂಟ್ ಮ್ಯಾನೇಜರ್(Assistant Manager), ಡೆಪ್ಯುಟಿ ಮ್ಯಾನೇಜರ್(Deputy Manager), ರೀಜನಲ್ ಮ್ಯಾನೇಜರ್(Regional Manager) ಹುದ್ದೆಗಳು ಖಾಲಿ ಇದ್ದು, ಪದವಿ, ಸ್ನಾತಕೋತ್ತರ ಪದವಿ, CA, CMA ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 30, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನ್ಯಾಷನಲ್ ಹೌಸಿಂಗ್ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​ nhb.org.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆ ನ್ಯಾಷನಲ್ ಹೌಸಿಂಗ್ ಬ್ಯಾಂಕ್
ಹುದ್ದೆಯ ಹೆಸರು ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ರೀಜನಲ್ ಮ್ಯಾನೇಜರ್
ಒಟ್ಟು ಹುದ್ದೆಗಳು 17
ವಿದ್ಯಾರ್ಹತೆ ಪದವಿ, ಸ್ನಾತಕೋತ್ತರ ಪದವಿ, CA, CMA
ಉದ್ಯೋಗದ ಸ್ಥಳ ನವದೆಹಲಿ
ವೇತನ ಮಾಸಿಕ ₹ 36,000-89,890
ಅರ್ಜಿ ಸಲ್ಲಿಕೆ ವಿಧಾನ ಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 01/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/12/2021





ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/12/2021

ಇದನ್ನೂ ಓದಿ: AIISH Mysore Recruitment 2021: ಮೈಸೂರು ವಾಕ್​-ಶ್ರವಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ & ಒಬಿಸಿ ವರ್ಗದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಎಸ್​ಸಿ, ಎಸ್​ಟಿ, PWD ಅಭ್ಯರ್ಥಿಗಳು 175 ರೂ. ಅರ್ಜಿ ಶುಲ್ಕ ಕಟ್ಟಬೇಕು. ಆನ್​ಲೈನ್​ ಮೂಲಕ ಪಾವತಿಸಬೇಕು.

ಹುದ್ದೆಯ ಮಾಹಿತಿ:

ಅಸಿಸ್ಟೆಂಟ್ ಮ್ಯಾನೇಜರ್ - 14
ಡೆಪ್ಯುಟಿ ಮ್ಯಾನೇಜರ್- 02
ರೀಜನಲ್ ಮ್ಯಾನೇಜರ್- 01

ವಿದ್ಯಾರ್ಹತೆ:

ಅಸಿಸ್ಟೆಂಟ್ ಮ್ಯಾನೇಜರ್ - ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ವಿಷಯದಲ್ಲಿ ಕಡ್ಡಾಯವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ CA/CMA ಅಭ್ಯಾಸ ಮಾಡಿರಬೇಕು.

ಡೆಪ್ಯುಟಿ ಮ್ಯಾನೇಜರ್- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ವಿಷಯದಲ್ಲಿ ಕಡ್ಡಾಯವಾಗಿ ಪದವಿ ಪಡೆದಿರಬೇಕು.

ರೀಜನಲ್ ಮ್ಯಾನೇಜರ್- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಫೈನಾನ್ಸಿಯಲ್ ರಿಸ್ಕ್​ ಮ್ಯಾನೇಜ್​ಮೆಂಟ್​ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್ : 21-30 ವರ್ಷ
ಡೆಪ್ಯುಟಿ ಮ್ಯಾನೇಜರ್: 21-32 ವರ್ಷ
ರೀಜನಲ್ ಮ್ಯಾನೇಜರ್ : 30-45 ವರ್ಷ

ಇದನ್ನೂ ಓದಿ: IISc Bangalore Recruitment 2021: ತಿಂಗಳಿಗೆ ₹ 25,000 ಸಂಬಳ; BE, B Tech ಆದವರಿಗೆ IISc ಬೆಂಗಳೂರಿನಲ್ಲಿ ಉದ್ಯೋಗ

ಉದ್ಯೋಗದ ಸ್ಥಳ:
ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 36,000-63,840
ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹ 48,170-69,810
ರೀಜನಲ್ ಮ್ಯಾನೇಜರ್- ಮಾಸಿಕ ₹ 76,010-89,890

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: