NHM Recruitment 2021: ಸ್ಟಾಫ್​ ನರ್ಸ್​​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡಲು ಹೀಗೆ ಮಾಡಿ

ಸ್ಟಾಫ್​ ನರ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ/ಯೂನಿವರ್ಸಿಟಿಯಿಂದ ಜಿಎನ್​ಎಂ/ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
NHM Recruitment 2021: ರಾಷ್ಟ್ರೀಯ ಆರೋಗ್ಯ ಮಿಷನ್(National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 387 ಸ್ಟಾಫ್​​ ನರ್ಸ್(Staff Nurse)​ ಹುದ್ದೆಗಳು ಖಾಲಿ ಇದ್ದು, ಜಿಎನ್​ಎಂ, ಬಿಎಸ್ಸಿ ನರ್ಸಿಂಗ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲಬೇಕು. ಡಿಸೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nhm.assam.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆರಾಷ್ಟ್ರೀಯ ಆರೋಗ್ಯ ಮಿಷನ್
ಹುದ್ದೆಯ ಹೆಸರುಸ್ಟಾಫ್ ನರ್ಸ್​
ಒಟ್ಟು ಹುದ್ದೆಗಳು387
ವಿದ್ಯಾರ್ಹತೆಜಿಎನ್​ಎಂ, ಬಿಎಸ್ಸಿ ನರ್ಸಿಂಗ್​
ಉದ್ಯೋಗದ ಸ್ಥಳಗುಹಾವಟಿ (ಅಸ್ಸಾಂ)
ವೇತನಮಾಸಿಕ ₹ 18,000
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ16/12/2021



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/12/2021

ಇದನ್ನೂ ಓದಿ: Government Job: ಪೋಸ್ಟ್ ಆಫೀಸ್​​ನಲ್ಲಿ ಕೆಲಸ ಖಾಲಿ ಇದೆ, SSLC, PUC ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:
ಸ್ಟಾಫ್​ ನರ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ/ಯೂನಿವರ್ಸಿಟಿಯಿಂದ ಜಿಎನ್​ಎಂ/ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸ್ಟಾಫ್​ ನರ್ಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2021ಕ್ಕೆ ಗರಿಷ್ಠ 43 ವರ್ಷ ಮೀರಿರಬಾರದು.

ವೇತನ:
ಸ್ಟಾಫ್​ ನರ್ಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 18,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ:KPSC: ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಮಾಸಿಕ ವೇತನ ₹ 62,400, ಇಂದೇ ಅರ್ಜಿ ಸಲ್ಲಿಸಿ

ಉದ್ಯೋಗದ ಸ್ಥಳ:
ಸ್ಟಾಫ್​ ನರ್ಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಸ್ಸಾಂನ ಗುಹಾವಟಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: