• Home
  • »
  • News
  • »
  • jobs
  • »
  • NHM Recruitment: 1200 ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ

NHM Recruitment: 1200 ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 43 ವರ್ಷ ಮೀರಿರಬಾರದು.

  • News18 Kannada
  • Last Updated :
  • Bhopal, India
  • Share this:

    NHM Recruitment 2022: ರಾಷ್ಟ್ರೀಯ ಆರೋಗ್ಯ ಸಂಸ್ಥೆ(National Health Mission-NHM) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1200 ಮಹಿಳಾ ಆರೋಗ್ಯ ಕಾರ್ಯಕರ್ತೆ(Female Health Worker) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. 10ನೇ ತರಗತಿ, ಪಿಯುಸಿ, ANM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಕೂಡಲೇ ಆನ್​ಲೈನ್(Online) ಮೂಲಕ ಅರ್ಜಿ ಹಾಕಿ. ನವೆಂಬರ್ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಆರೋಗ್ಯ ಸಂಸ್ಥೆ
    ಹುದ್ದೆಯ ಹೆಸರುಮಹಿಳಾ ಆರೋಗ್ಯ ಕಾರ್ಯಕರ್ತೆ
    ಒಟ್ಟು ಹುದ್ದೆ1200
    ವಿದ್ಯಾರ್ಹತೆ10th, ಪಿಯುಸಿ
    ವೇತನಮಾಸಿಕ ₹ 12,000
    ಸ್ಥಳಮಧ್ಯಪ್ರದೇಶದ ಭೂಪಾಲ್
    ಅರ್ಜಿ ಸಲ್ಲಿಕೆ  ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ16/11/2022
    ಅರ್ಜಿ ಸಲ್ಲಿಸಲು ಕೊನೆ ದಿನ12/12/2022


    ವಿದ್ಯಾರ್ಹತೆ
    ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯುಸಿ ಪಾಸಾಗಿರಬೇಕು.


    ಜೊತೆಗೆ ಮಧ್ಯಪ್ರದೇಶ ಸರ್ಕಾರದಿಂದ ನಡೆಸಲ್ಪಡುವ ಆಕ್ಸಿಲರಿ ನರ್ಸಿಂಗ್ ಮಿಡ್‌ವೈಫ್ ತರಬೇತಿ ಕೇಂದ್ರದಿಂದ ಮಹಿಳಾ ವಿವಿಧೋದ್ದೇಶ ಕಾರ್ಯಕರ್ತೆ/ಆಕ್ಸಿಲಿಯರಿ ನರ್ಸಿಂಗ್ ಮಿಡ್‌ವೈಫ್‌ನ 2 ವರ್ಷಗಳ ತರಬೇತಿ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.


    ಇದನ್ನೂ ಓದಿ: NIMHANS Recruitment 2022: ನಿಮ್ಹಾನ್ಸ್​​ನಲ್ಲಿರುವ 47,000 ಸಂಬಳದ ಉದ್ಯೋಗಕ್ಕೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ


    ವಯೋಮಿತಿ:
    ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 43 ವರ್ಷ ಮೀರಿರಬಾರದು.


    ಉದ್ಯೋಗದ ಸ್ಥಳ:
    ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದ ಭೂಪಾಲ್​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ವೇತನ:
    ರಾಷ್ಟ್ರೀಯ ಆರೋಗ್ಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000 ವೇತನ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ದಾಖಲಾತಿ ಪರಿಶೀಲನೆ
    ವೈಯಕ್ತಿಕ ಸಂದರ್ಶನ


    ಇದನ್ನೂ ಓದಿ: NESAC Recruitment 2022: ತಿಂಗಳಿಗೆ 1.77 ಲಕ್ಷ ಸಂಬಳ- ಬಿಇ/ ಬಿ ಟೆಕ್ ಆದವರಿಗೆ ಇಲ್ಲಿದೆ ಬಂಪರ್ ಉದ್ಯೋಗ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 12/12/2022

    Published by:Latha CG
    First published: