NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ

NIA Recruitment 2022: ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ದಳ

ರಾಷ್ಟ್ರೀಯ ತನಿಖಾ ದಳ

  • Share this:
    ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ (National Investigation Agency) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ (Assistant) ಮತ್ತು ಅಕೌಂಟೆಂಟ್ (Accountant)​ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆಫ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 28 ಆಗಿದೆ.

    ಈ ಹುದ್ದೆಗಳನ್ನು ಡೆಪ್ಯೂಟೇಷನ್​ (ನಿಯೋಜನಾ ಪದ್ಧತಿ) ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ರಾಷ್ಟ್ರೀಯ ತನಿಖಾ ಸಂಸ್ಥೆ (NIA)
    ಹುದ್ದೆಯ ಹೆಸರು: ಸಹಾಯಕ, ಅಕೌಂಟೆಂಟ್
    ಹುದ್ದೆಗಳ ಸಂಖ್ಯೆ: 48
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 25500-142400 ರೂ ಪ್ರತಿ ತಿಂಗಳು







































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು3ಪದವಿ44900-142400 ರೂ ಮಾಸಿಕ
    ಸಹಾಯಕ9ಪದವಿ35400-112400 ರೂ ಮಾಸಿಕ
    ಅಕೌಂಟೆಂಟ್1ಪದವಿ35400-112400 ರೂ ಮಾಸಿಕ
    ಸ್ಟೆನೋಗ್ರಾಫರ್ ಗ್ರೇಡ್-I23ಪದವಿ35400-112400 ರೂ ಮಾಸಿಕ
    ಅಪ್ಪರ್ ಡಿವಿಷನ್ ಕ್ಲರ್ಕ್ (UDC)12ಎನ್​ಐಎ ನಿಯಮದ ಅನುಸಾರ25500-81100 ರೂ ಮಾಸಿಕ

    ವಯಸ್ಸಿನ ಮಿತಿ: ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ: 
    ರಾಷ್ಟ್ರೀಯ ತನಿಖಾ ಸಂಸ್ಥೆಯ ನಿಯಮಗಳ ಪ್ರಕಾರ

    ಇದನ್ನು ಓದಿ: ನೌಕರರ ರಾಜ್ಯ ವಿಮಾ ನಿಗಮದಲ್ಲಿ 33 ಹುದ್ದೆಗಳಿಗೆ ವಾಕ್​-ಇನ್​-ಇಂಟರ್​ವ್ಯೂ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nia.gov.in

    ಇದನ್ನು ಓದಿ: ಅಟಲ್​ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇದೆ 61 ಹುದ್ದೆ; ಬೇಗ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.

    ಅರ್ಜಿ ಸಲ್ಲಿಕೆ ವಿಳಾಸ

    ಎಸ್​ಪಿ (ಆಡಳಿತ), ಎನ್​ಐಎ ಮುಖ್ಯ ಕಚೇರಿ, ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ, ನವದೆಹಲಿ - 110003
    Published by:Seema R
    First published: