• Home
  • »
  • News
  • »
  • jobs
  • »
  • Government Job: ಬೆಂಗಳೂರಿನಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಿ, ಕೇಂದ್ರ ಸರ್ಕಾರದ ಕೆಲಸ ಗಿಟ್ಟಿಸಿಕೊಳ್ಳಿ!

Government Job: ಬೆಂಗಳೂರಿನಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗಿಯಾಗಿ, ಕೇಂದ್ರ ಸರ್ಕಾರದ ಕೆಲಸ ಗಿಟ್ಟಿಸಿಕೊಳ್ಳಿ!

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 11, 2022ಕ್ಕೆ 35 ವರ್ಷ ಮೀರಿರಬಾರದು.

  • News18 Kannada
  • Last Updated :
  • Bangalore [Bangalore], India
  • Share this:

    ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ(ICAR- National Institute of Animal Nutrition and Physiology)ಯಲ್ಲಿ 1 ಸೀನಿಯರ್ ರಿಸರ್ಚ್​ ಫೆಲೋ(Senior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್(Posting) ನೀಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಇದೇ ನವೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.


    ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ
    ಹುದ್ದೆಸೀನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆM.V.Sc, M.Sc
    ವೇತನಮಾಸಿಕ ₹ 31,000
    ಸ್ಥಳಬೆಂಗಳೂರು
    ಸಂದರ್ಶನ ನಡೆಯುವ ದಿನಾಂಕ11/11/2022
    ನೋಟಿಫಿಕೇಶನ್ ಬಿಡುಗಡೆ ದಿನಾಂಕ06/11/2022
    ಸಂದರ್ಶನ ನಡೆಯುವ ಸ್ಥಳಬೆಂಗಳೂರು


    ವಿದ್ಯಾರ್ಹತೆ:
    ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅನಿಮಲ್ ಫಿಸಿಯಾಲಜಿ/ಜೆನೆಟಿಕ್ಸ್ ಮತ್ತು ಬ್ರೀಡಿಂಗ್/ನ್ಯೂಟ್ರಿಷನ್/ಲೈವ್​ಸ್ಟಾಕ್​ ಪ್ರೊಡಕ್ಷನ್ ಮತ್ತು ಮ್ಯಾನೇಜ್​ಮೆಂಟ್​ ವಿಭಾಗದಲ್ಲಿ M.V.Sc, M.Sc ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: HAL Recruitment: ನೀವು SSLC, PUC ಪಾಸಾಗಿದ್ರೆ ತುಮಕೂರಿನಲ್ಲಿದೆ ಬಂಪರ್ ಉದ್ಯೋಗ, ತಿಂಗಳಿಗೆ 21,000 ಸಂಬಳ


    ವಯೋಮಿತಿ:
    ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 11, 2022ಕ್ಕೆ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಮಹಿಳಾ ಅಭ್ಯರ್ಥಿಗಳು-5 ವರ್ಷ


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಸಂದರ್ಶನ ನಡೆಯುವ ಸ್ಥಳ:
    ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ನವೆಂಬರ್ 11, 2022ರಂದು ಬೆಳಗ್ಗೆ 11 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.


    ICAR-NIANP
    ಆಡುಗೋಡಿ
    ಬೆಂಗಳೂರು-560030
    ಕರ್ನಾಟಕ


    ಇದನ್ನೂ ಓದಿ: ICICI ಬ್ಯಾಂಕ್​ನಲ್ಲಿ 10th, PUC ಪಾಸಾದವರಿಗೂ ಉದ್ಯೋಗ, ಸಂಬಳ ₹ 45,000


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 06/11/2022
    ಸಂದರ್ಶನ ನಡೆಯುವ ದಿನ 11/11/2022

    Published by:Latha CG
    First published: