NIFT Recruitment 2021: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ(National Institute of Fashion Technology) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 190 ಅಸಿಸ್ಟೆಂಟ್ ಪ್ರೊಫೆಸರ್(Assistant Professor) ಹುದ್ದೆಗಳು ಖಾಲಿ ಇದ್ದು, ಪಿಎಚ್ಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 31, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.nift.ac.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: SBI Recruitment 2021: ತಿಂಗಳಿಗೆ ₹ 63,840 ಸಂಬಳ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ
ಸಂಸ್ಥೆ |
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ |
ಹುದ್ದೆಯ ಹೆಸರು |
ಅಸಿಸ್ಟೆಂಟ್ ಪ್ರೊಫೆಸರ್ |
ಒಟ್ಟು ಹುದ್ದೆಗಳು |
190 |
ವಿದ್ಯಾರ್ಹತೆ |
ಪಿಎಚ್.ಡಿ |
ಉದ್ಯೋಗದ ಸ್ಥಳ |
ಭಾರತ |
ವೇತನ |
ಮಾಸಿಕ ₹ 56,100 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
08/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
31/01/2022 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/201
ಅರ್ಜಿ ಶುಲ್ಕ:
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,180 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/PWD ಅಭ್ಯರ್ಥಿಗಳಿಗೆ ಶುಲ್ಕ
ವಿನಾಯಿತಿ ನೀಡಲಾಗಿದೆ.
ವಿದ್ಯಾರ್ಹತೆ:
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪಿಚ್ಡಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Excise Recruitment 2021: ಕೇಂದ್ರ ಅಬಕಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 81,100
ವಯೋಮಿತಿ:
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ:
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 56,100 ವೇತನ ನೀಡಲಾಗುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಶಾರ್ಟ್ಲಿಸ್ಟಿಂಗ್
ಲಿಖಿತ ಪರೀಕ್ಷೆ
ಪ್ರೆಸೆಂಟೇಶನ್/ ಕ್ಲಾಸ್ರೂಂ ಲೆಕ್ಚರ್
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ