ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ (National Institute of Mental Health and Neuro Sciences) ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ (Psychiatric Social Worker) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡು ಹುದ್ದೆಗಳು ಖಾಲಿ ಇದ್ದು, ಇದರ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಸೈಕಿಯಾಟ್ರಿಕ್ ಪದವಿ ಅಥವಾ ಎಂಎಸ್ಡಬ್ಲ್ಯೂ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ. ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಯನ್ನು ಒಂದು ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಪ್ರಾರಂಭಿಕವಾಗಿ ಆರು ತಿಂಗಳ ಅವಧಿ ಆಗಿದ್ದು, ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ ಮಾಹಿತಿ |
ಹುದ್ದೆ ವಿವರ |
ಸಂಸ್ಥೆ |
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) |
ಹುದ್ದೆ |
ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ |
ಹುದ್ದೆಗಳ ಸಂಖ್ಯೆ |
2 |
ಉದ್ಯೋಗ ಸ್ಥಳ |
ಬೆಂಗಳೂರು |
ವೇತನ |
38440 ರೂ. ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್ ನಲ್ಲಿ ಎಂಫಿಲ್ ಅಥವಾ ಎಂಎಸ್ಡಬ್ಲ್ಯೂ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಿಯಮದ ಪ್ರಕಾರ
ಇದನ್ನು ಓದಿ: 650 ಹುದ್ದೆಗಳಿಗೆ ನೇಮಕಾತಿ; ಬಿಇ ಆದವರಿಗೆ ಭರ್ಜರಿ ಅವಕಾಶ
ಅರ್ಜಿ ಸಲ್ಲಿಕೆ
ಇಮೇಲ್ ಮುಖಾಂತರ
ಇಮೇಲ್ ವಿಳಾಸ:
homesstudyprs@gmail.com
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06 ಜುಲೈ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 20 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
nimhans.ac.in
ಇದನ್ನು ಓದಿ: ಲೈಬ್ರರಿ ಸೈನ್ಸ್ ಪದವೀಧರರಿಗೆ ಬಿಇಎಲ್ನಲ್ಲಿದೆ ಉದ್ಯೋಗಾವಕಾಶ
ಅರ್ಜಿ ಸಲ್ಲಿಕೆ ವಿಧಾನ
ಸಂಸ್ಥೆ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸುವ ಬಟನ್ ಕ್ಲಿಕ್ ಮಾಡಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ