• Home
  • »
  • News
  • »
  • jobs
  • »
  • Job Search: ನೀವು M.Sc ಮಾಡಿದ್ದೀರಾ? ಬೆಂಗಳೂರಿನಲ್ಲಿದೆ 35,000 ಸಂಬಳದ ಉದ್ಯೋಗ, ಈಗಲೇ Apply ಮಾಡಿ

Job Search: ನೀವು M.Sc ಮಾಡಿದ್ದೀರಾ? ಬೆಂಗಳೂರಿನಲ್ಲಿದೆ 35,000 ಸಂಬಳದ ಉದ್ಯೋಗ, ಈಗಲೇ Apply ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

  • News18 Kannada
  • Last Updated :
  • Bangalore, India
  • Share this:

    NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ(Senior Research Fellow)​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 23, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಯ ಹೆಸರುಸೀನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಎಂಎಸ್ಸಿ
    ವೇತನಮಾಸಿಕ ₹ 35,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನಾಂಕ09/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ23/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೈಕ್ರೋಬಯಾಲಜಿ/ವೈರಾಲಜಿ/ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: TCS is Hiring: ನೇರ ನೇಮಕಾತಿ- ಯಾವುದೇ ಪರೀಕ್ಷೆ ಇಲ್ಲ, ತಿಂಗಳಿಗೆ 38,000 ಸಂಬಳ -ಈಗಲೇ Apply ಮಾಡಿ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ virologyvacancies@gmail.com ಗೆ ನವೆಂಬರ್ 23,2022ಕ್ಕೆ ಮುನ್ನ ಕಳುಹಿಸಬೇಕು.


    ಇದನ್ನೂ ಓದಿ: IIIT Bangalore: ನಿಮ್ಮದು ಎಂಜಿನಿಯರಿಂಗ್ ಆಗಿದೆಯಾ? ಬೆಂಗಳೂರಿನಲ್ಲಿದೆ 5.40 ಲಕ್ಷ ಸಂಬಳದ ಉದ್ಯೋಗ-ಈಗಲೇ ಅರ್ಜಿ ಹಾಕಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 23/11/2022

    Published by:Latha CG
    First published: