• Home
  • »
  • News
  • »
  • jobs
  • »
  • Nimhans Recruitment 2022: ನಿಮ್ಹಾನ್ಸ್​​ನಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಕೆಗೆ ಎರಡೇ ದಿನ ಬಾಕಿ

Nimhans Recruitment 2022: ನಿಮ್ಹಾನ್ಸ್​​ನಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಕೆಗೆ ಎರಡೇ ದಿನ ಬಾಕಿ

ನಿಮ್ಹಾನ್ಸ್​

ನಿಮ್ಹಾನ್ಸ್​

ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 23, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

  • News18 Kannada
  • Last Updated :
  • Bangalore [Bangalore], India
  • Share this:

    ವಿಜ್ಞಾನ ವಿಭಾಗದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳಿಗೆ ಪ್ರತಿಷ್ಟಿತ ನಿಮ್ಹಾನ್ಸ್​​ ನಲ್ಲಿ ಕೆಲಸ ಮಾಡುವ ಅವಕಾಶ ಬಂದಿದೆ.  ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ(Senior Research Fellow)​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


    ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 23, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 23/11/2022

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಯ ಹೆಸರುಸೀನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಎಂಎಸ್ಸಿ
    ವೇತನಮಾಸಿಕ ₹ 35,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನಾಂಕ09/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ23/11/2022

    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    1) ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.


    2) ರೆಸ್ಯೂಮ್​​ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.


    3) ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.


     ವಿದ್ಯಾರ್ಹತೆ:  ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೈಕ್ರೋಬಯಾಲಜಿ/ವೈರಾಲಜಿ/ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: TCS is Hiring: ನೇರ ನೇಮಕಾತಿ- ಯಾವುದೇ ಪರೀಕ್ಷೆ ಇಲ್ಲ, ತಿಂಗಳಿಗೆ 38,000 ಸಂಬಳ -ಈಗಲೇ Apply ಮಾಡಿ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ virologyvacancies@gmail.com ಗೆ ನವೆಂಬರ್ 23,2022ಕ್ಕೆ ಮುನ್ನ ಕಳುಹಿಸಬೇಕು.

    Published by:Kavya V
    First published: