NIMHANS Recruitment: ನಿಮ್ಹಾನ್ಸ್​ನಲ್ಲಿ ಒಪ್ಪಂದದ ಆಧಾರದ ಮೇಲೆ ಉದ್ಯೋಗ ನೇಮಕಾತಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ.

ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಗೆ ಅರ್ಜಿ ಆಹ್ವಾನ

  • Share this:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ( National Institute of Mental Health and Neuro Sciences) ಕ್ಷೇತ್ರ ಸಮನ್ವಯಾಧಿಕಾರಿ, ಫೀಲ್ಡ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 6 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್​ ಮೂಲಕ ಸಲ್ಲಿಸಬಹುದಾಗಿದೆ. ಇಮೇಲ್​ ಮೂಲಕ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಆಗಸ್ಟ್​ 26 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಹುದ್ದೆಯ ಅವಧಿ ಆರು ತಿಂಗಳಾಗಿದ್ದು, ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ವಿಸ್ತರಣೆ ನಡೆಸಲಾಗುವುದು.ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ನಿಮ್ಹಾನ್ಸ್
    ಹುದ್ದೆಯ ಹೆಸರು: ಫೀಲ್ಡ್ ಕೋಆರ್ಡಿನೇಟರ್, ಫೀಲ್ಡ್ ಸ್ಟಾಫ್
    ಹುದ್ದೆಗಳ ಸಂಖ್ಯೆ: 6
    ಉದ್ಯೋಗ ಸ್ಥಳ: ಬೆಂಗಳೂರು
    ವೇತನ: 25000-35000 ರೂ ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಫೀಲ್ಡ್​ ಕೋ ಆರ್ಡಿನೇಟರ್​​1ಸಾರ್ವಜನಿಕ ಆರೋಗ್ಯದಲ್ಲಿ ಸ್ನಾತಕೋತ್ತರ ಪದವಿ35000 ರೂ ಮಾಸಿಕ
    ಫೀಲ್ಡ್​ ಸ್ಟಾಫ್​5ನಿಮ್ಹಾನ್ಸ್​ ನಿಯಮಗ ಪ್ರಕಾರ25000 ರೂ ಮಾಸಿಕ

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.

    ಇದನ್ನು ಓದಿ: ಗ್ರಾಜುಯೇಟ್​ ಇಂಜಿನಿಯರ್​​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 40 ಸಾವಿರ ರೂ ವೇತನ

    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ: ಇಮೇಲ್​ ಮುಖಾಂತರ

    ಇಮೇಲ್​ ವಿಳಾಸ: aravind_baa@yahoo.co.in

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 04 ಆಗಸ್ಟ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 26 ಆಗಸ್ಟ್ 2022

    ಇದನ್ನು ಓದಿ: ನೌಕರರ ರಾಜ್ಯ ವಿಮಾ ನಿಗಮದಲ್ಲಿ 33 ಹುದ್ದೆಗಳಿಗೆ ವಾಕ್​-ಇನ್​-ಇಂಟರ್​ವ್ಯೂ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: nimhans.ac.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: