NIT Karnataka Recruitment 2022: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು (National Institute of Technology Karnataka) ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸುರತ್ಕಲ್ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 28-05-2022 ರ ಮೊದಲು ಇಮೇಲ್ ಕಳುಹಿಸಬಹುದು.
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವಾಗ ವೇತನ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ವಿಧ ಸೇರಿದಂತೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
ಸಂಸ್ಥೆಯ ಹೆಸರು |
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) |
ಹುದ್ದೆಗಳ ಸಂಖ್ಯೆ |
1 |
ಉದ್ಯೋಗ ಸ್ಥಳ |
ಸುರತ್ಕಲ್ - ಕರ್ನಾಟಕ |
ಹುದ್ದೆಯ ಹೆಸರು |
ಜೂನಿಯರ್ ರಿಸರ್ಚ್ ಫೆಲೋ (JRF) |
ವೇತನ |
ರೂ.31000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ಥರ್ಮಲ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಟ್ರೋಲ್ ಎಂಜಿನಿಯರಿಂಗ್, ಆಟೋಮೊಬೈಲ್ ಎಂಜಿನಿಯರಿಂಗ್, ಮಷಿನ್ ಡೈನಾಮಿಕ್ಸ್, M.E ಅಥವಾ M.Tech |
ವಯೋಮಿತಿ |
32 |
ಅರ್ಜಿ ಹಾಕುವ ಮೇಲ್ |
hemantha@nitk.edu.in |
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ |
28-05-2022 |
ಸುರತ್ಕಲ್ನಲ್ಲಿ ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅರ್ಜಿ ಆಹ್ವಾನಿಸಿದ್ದು, M.E ಅಥವಾ M.Tech ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಹಾಕಬಹುದು. ಮೇ 28 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.31000/ ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ
ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)
ವೇತನ: ರೂ.31000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಂತ್ರ ವಿನ್ಯಾಸ, ಥರ್ಮಲ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಟ್ರೋಲ್ ಎಂಜಿನಿಯರಿಂಗ್, ಆಟೋಮೊಬೈಲ್ ಎಂಜಿನಿಯರಿಂಗ್, ಮಷಿನ್ ಡೈನಾಮಿಕ್ಸ್, M.E ಅಥವಾ M.Tech ಪೂರ್ಣಗೊಳಿಸಿರಬೇಕು.
ವಯೋಮಿತಿ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು.
ಇದನ್ನೂ ಓದಿ: ಸಂಶೋಧನಾ ಅಧಿಕಾರಿ ಹುದ್ದೆ ಭರ್ತಿಗೆ ಆದೇಶ - ನಾಳೆ ನೇರ ಸಂದರ್ಶನಕ್ಕೆ ಹಾಜರಾಗಿ
ವಯಸ್ಸಿನ ಸಡಿಲಿಕೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ,
hemantha@nitk.edu.in ಗೆ 28-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ವೆಬ್ಸೈಟ್:
nitk.ac.in
ಹೆಚ್ಚಿನ ವಿವರಗಳಿಗಾಗಿ, ಪ್ರಧಾನ ತನಿಖಾಧಿಕಾರಿಗಳನ್ನು ಸಂಪರ್ಕಿಸಿ: ದೂರವಾಣಿ ಸಂಖ್ಯೆ: +918762709897, ಇಮೇಲ್:
hemantha@nitk.edu.in, ಸಹ-ಪ್ರಧಾನ ತನಿಖಾಧಿಕಾರಿ
ಇಮೇಲ್: m.arun1978@gmail.com
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 22-04-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 28-05-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ