• Home
  • »
  • News
  • »
  • jobs
  • »
  • NIT Karnataka Recruitment: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ವೇತನ 31,000

NIT Karnataka Recruitment: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ವೇತನ 31,000

NIT Karnataka

NIT Karnataka

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೂರತ್ಕಲ್ ಹಾಗೂ ಕರ್ನಾಟಕದಲ್ಲಿ(Karnataka) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಡಿಸೆಂಬರ್ 8, 2022 ರೊಳಗೆ ಇ-ಮೇಲ್ ಮಾಡಬೇಕು.

  • News18 Kannada
  • Last Updated :
  • Karnataka, India
  • Share this:

    NIT Karnataka Recruitment 2022: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ-ಕರ್ನಾಟಕ (National Institute of Technology Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಜೂನಿಯರ್ ರಿಸರ್ಚ್​ ಫೆಲೋ(Junior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೂರತ್ಕಲ್ ಹಾಗೂ ಕರ್ನಾಟಕದಲ್ಲಿ(Karnataka) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಡಿಸೆಂಬರ್ 8, 2022 ರೊಳಗೆ ಇ-ಮೇಲ್ ಮಾಡಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ತಾಂತ್ರಿಕ ಸಂಸ್ಥೆ-ಕರ್ನಾಟಕ
    ಹುದ್ದೆಜೂನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ಉದ್ಯೋಗದ ಸ್ಥಳಕರ್ನಾಟಕ, ಸೂರತ್ಕಲ್
    ವೇತನಮಾಸಿಕ 31,000


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 22/11/2022
    ಇ-ಮೇಲ್ ಮಾಡಲು ಕೊನೆಯ ದಿನ: 08/12/2022


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ರಾಷ್ಟ್ರೀಯ ತಾಂತ್ರಿಕ ಸಂಸ್ಥೆ-ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂಇ/ ಎಂಟೆಕ್, ಎಂಎಸ್(R), ಎಂಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Government Job: ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್​​ನಲ್ಲಿ SSLC ಪಾಸಾದವರಿಗೆ ಉದ್ಯೋಗ, ಸಂಬಳ 47,000


    ವಯೋಮಿತಿ:
    ರಾಷ್ಟ್ರೀಯ ತಾಂತ್ರಿಕ ಸಂಸ್ಥೆ-ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
    ಮೊದಲಿಗೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನೀಡಲಾಗುತ್ತದೆ. ಬಳಿಕ ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ.


    ಅರ್ಜಿ ಇಲ್ಲಿದೆ:


    NIT-Karnataka application form


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಇ-ಮೇಲ್ ಐಡಿ shyamfec@nitk.edu.in ಗೆ ಡಿಸೆಂಬರ್ 8, 2022 ರೊಳಗೆ ಅರ್ಜಿ ಸಲ್ಲಿಸಿ.

    Published by:Latha CG
    First published: