NITI Aayog Recruitment: ನೀತಿ ಆಯೋಗದಲ್ಲಿ ಯುವ ವೃತ್ತಿಪರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳನ್ನು ಎರಡು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. 

ನೀತಿ ಆಯೋಗ

ನೀತಿ ಆಯೋಗ

  • Share this:
    ನೀತಿ ಆಯೋಗದಲ್ಲಿ (National Institute of Transforming India Aayog- NITI Aayog) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲಾಗಿದೆ. ಯುವ ವೃತ್ತಿಪರ (Young Professional) ಮತ್ತು ಕನ್ಸಲ್ಟೆಂಟ್​ ಗ್ರೇಡ್​ 1 (consultant Grade- 1)  ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 28 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ.

    ಈ ಹುದ್ದೆಗಳನ್ನು ಎರಡು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾನ್ಸ್‌ಫಾರ್ಮಿಂಗ್ ಇಂಡಿಯಾ ಆಯೋಗ (NITI Aayog)
    ಹುದ್ದೆಯ ಹೆಸರು: ಸಲಹೆಗಾರ, ಯುವ ವೃತ್ತಿಪರ
    ಹುದ್ದೆಗಳ ಸಂಖ್ಯೆ: 28
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 70,000- 1.45000 ರೂ ಮಾಸಿಕ
























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಕನ್ಸಲ್ಟೆಂಟ್​​ ಗ್ರೇಡ್​-16ಪದವಿ, ಬಿಇ, ಎಂಬಿಬಿಎಸ್​ ಎಲ್​ಎಲ್​ಬಿ1. 45000 ರೂ ಮಾಸಿಕಗರಿಷ್ಟ 45
    ಯುವ ವೃತ್ತಿಪರ22ಪದವಿ, ಬಿಇ, ಎಂಬಿಬಿಎಸ್​ ಎಲ್​ಎಲ್​ಬಿ70000 ರೂ ಮಾಸಿಕಗರಿಷ್ಟ 32 ವರ್ಷ

    ಅನುಭವ
    ಕನ್ಸ್​ಲ್ಟೆಂಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾರ್ಯಕ್ರಮ ನಿರ್ವಹಣೆ, ಸಂಶೋಧನೆ ಸೇರಿದಂತೆ ಸಂಬಂಧಿಸಿದ ಕ್ಷೇತ್ರದಲ್ಲಿ 3 ರಿಂದ 8 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.

    ಯುವ ವೃತ್ತಿಪರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಒಂದು ವರ್ಷ ಹುದ್ದೆ ಅನುಭವ ಹೊಂದಿರಬೇಕು.

    ಇದನ್ನು ಓದಿ: ಫ್ರೆಶರ್ಸ್​​ಗೆ ಬೆಂಗಳೂರಿನ ಡೆಲ್​ನಲ್ಲಿದೆ ಉದ್ಯೋಗಾವಕಾಶ; 8.5 ಲಕ್ಷ ರೂ ವಾರ್ಷಿಕ ವೇತನ

    ಅರ್ಜಿ ಸಲ್ಲಿಕೆ: ಆನ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್​​ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಸೆಪ್ಟೆಂಬರ್​ 2022
    ಆನ್​ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಅಕ್ಟೋಬರ್​​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: niti.gov.in

    ಇದನ್ನು ಓದಿ: ಕರ್ನಾಟಕ ಆಂಟಿಬಯಾಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿದೆ ಉದ್ಯೋಗ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: