ಸುರತ್ಕಲ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (National Institute of Technology Karnataka) ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಶಿಕ್ಷಣದಲ್ಲಿ ಸಂಶೋಧನೆ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 30 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಇಮೇಲ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆ ಅವಧಿ 36 ತಿಂಗಳ ಕಾಲ ಆಗಿರಲಿದೆ. ಈ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಹುದ್ದೆಯ ಹೆಸರು: ಜೆಆರ್ಎಫ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ
ವೇತನ: ರೂ.15000-35000ರೂ ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಖ್ಯೆ |
ವಯೋಮಿತಿ |
ವೇತನ |
ಜೂನಿಯರ್ ರಿಸರ್ಚ್ ಫೆಲೋ (JRF) |
1 |
ಗರಿಷ್ಠ 30 ವರ್ಷ |
31000-35000 ರೂ ಮಾಸಿಕ |
ವಿದ್ಯಾರ್ಹತೆ:
ಜೂನಿಯರ್ ರಿಸರ್ಚ್ ಫೆಲೋ (JRF): ಬಿಇ ಅಥವಾ ಬಿಟೆಕ್. ಎಂಇ ಅಥವಾ ಎಂಟೆಕ್, ಎಂಎಸ್ (ಆರ್)
ಇದನ್ನು ಓದಿ: ಧಾರವಾಡ ಕೃಷಿ ವಿವಿಯಲ್ಲಿ ಬೇಕಾಗಿದ್ದಾರೆ ಅರೆಕಾಲಿಕ ಉಪನ್ಯಾಸಕರು; ಬೇಗ ಅರ್ಜಿ ಸಲ್ಲಿಸಿ
ಹುದ್ದೆಯ ಅವಧಿ
ಜೂನಿಯರ್ ರಿಸರ್ಚ್ ಫೆಲೋ: 36 ತಿಂಗಳುಗಳು
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಿಯಮಾವಳಿಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕ
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: ಮೇ 27, 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 30 ಜೂನ್ 2022
ಇಮೇಲ್ ಐಡಿ
ಜೂನಿಯರ್ ರಿಸರ್ಚ್ ಫೆಲೋ (JRF) mandeep.singh@nitk.edu.in
ಇದನ್ನು ಓದಿ: ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಭರ್ಜರಿ ನೇಮಕಾತಿ; 876 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ವಿವರ
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ನೀಡಿ.
- ನಿಗದಿತ ನಮೂನೆಯಲ್ಲಿ ಫಾರ್ಮ್ ಅಲ್ಲಿ ಶೈಕ್ಷಣಿಕ ಮಾಹಿತಿ, ಅನುಭವ ಸೇರಿದಂತೆ ಇತರೆ ವಿವರಗಳನ್ನು ನೀಡಿ. ಯಾವ ಹುದ್ದೆಗೆ ಎಂಬುದನ್ನು ಅರ್ಜಿಯಲ್ಲಿ ನಮೂದಿಸಿ. ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ
-ಕೊನೆಯದಾಗಿ ಅರ್ಜಿ ನಮೂನೆಯನ್ನು ಪರಿಶೀಲಿಸಿ ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ