NITK Recruitment: ಸುರತ್ಕಲ್​ ಎನ್​ಐಟಿಕೆಯಲ್ಲಿದೆ ಕೆಲಸ; ಪ್ರಾಜೆಕ್ಟ್​ ಫೆಲೋ ಹುದ್ದೆಯ ಮಾಹಿತಿ ಇಲ್ಲಿದೆ

ಕೇಂದ್ರ ಸರ್ಕಾರದ ಗಣಿ ಸಚಿವಾಲಯದಿಂದ ನಡೆಯಲ್ಪಡುವ ಸಂಶೋಧನಾ ಯೋಜನೆಗೆ ಕಾರ್ಯ ನಿರ್ವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎನ್​​ಐಟಿಕೆ

ಎನ್​​ಐಟಿಕೆ

  • Share this:
    ಸುರತ್ಕಲ್​ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ (National Institute of Technology) ವಿವಿಧ ಪ್ರಾಜೆಕ್ಟ್​ ಫೆಲೋ (Project Fellow) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇ-ಮೇಲ್​ ಮೂಲಕ ಕಳುಹಿಸಬಹುದಾಗಿದ್ದು, ಇ-ಮೇಲ್​ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 26 ಆಗಿದೆ.

    ಕೇಂದ್ರ ಸರ್ಕಾರದ ಗಣಿ ಸಚಿವಾಲಯದಿಂದ ನಡೆಯಲ್ಪಡುವ ಸಂಶೋಧನಾ ಯೋಜನೆಗೆ ಕಾರ್ಯ ನಿರ್ವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆ ಅವಧಿ ಎರಡು ವರ್ಷಗಳಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
    ಹುದ್ದೆಯ ಹೆಸರುಪ್ರಾಜೆಕ್ಟ್ ಫೆಲೋ
    ಹುದ್ದೆಗಳ ಸಂಖ್ಯೆನಿರ್ದಿಷ್ಟಪಡಿಸಿಲ್ಲ
    ಉದ್ಯೋಗ ಸ್ಥಳಮಂಗಳೂರು
    ವೇತನ30000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ ಅಥವಾ ಬಿಟೆಕ್​, ಎಂಇ ಅಥವಾ ಎಂಟೆಕ್​, ಭೂಗೋಳಶಾಸ್ತ್ರದಲ್ಲಿ ಎಂಎಸ್ಸಿ ಪದವಿಯನ್ನು  ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಬಾಗಲಕೋಟೆ ತೋಟಗಾರಿಕಾ ವಿವಿಯಲ್ಲಿದೆ ಉದ್ಯೋಗ; ಪದವಿ ಆಗಿದ್ರೆ ಸಾಕು

    ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು ಮೀರಿರಬಾರದು.

    ಅರ್ಜಿ ಸಲ್ಲಿಕೆ: ಆನ್​ಲೈನ್​​

    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಸ್ಕ್ರೀನಿಂಗ್ ಮತ್ತು ಸಂದರ್ಶನ

    ಇಮೇಲ್​ ವಿಳಾಸ: krc@nitk.edu.in

    ಇದನ್ನು ಓದಿ: ಬಿಇಎಲ್​ನಲ್ಲಿ 24 ಡೆಪ್ಯುಟಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 02 ಸೆಪ್ಟೆಂಬರ್​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nitk.ac.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇ- ಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ತಲಪುವಂತೆ ನೋಡಿಕೊಳ್ಳಿ.
    Published by:Seema R
    First published: