NIVEDI Recruitment 2022: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್(National Institute of Veterinary Epidemiology and Disease Informatics) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಹಾಕಬೇಕು. ಡಿಸೆಂಬರ್ 19, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ |
ಹುದ್ದೆ | ಅಸಿಸ್ಟೆಂಟ್ |
ಒಟ್ಟು ಹುದ್ದೆ | 4 |
ವೇತನ | ಮಾಸಿಕ 9,300-34,800 ರೂ. |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: JOB ALERT: ಧಾರವಾಡ ಕೃಷಿ ವಿವಿಯಲ್ಲಿ ಯಂಗ್ ಪ್ರೊಫೆಶನಲ್ ಹುದ್ದೆ ಖಾಲಿ ಇದೆ- 25 ಸಾವಿರ ಸಂಬಳ
ಸಂಬಳ ಎಷ್ಟು?
ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 9,300-34,800 ರೂ. ವರೆಗೆ ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಹುದ್ದೆಯ ನೋಟಿಫಿಕೇಶನ್ ಮತ್ತು ಅರ್ಜಿ ಇಲ್ಲಿದೆ:
04-Assistant-Posts-Advt-Details-Application-Form-NIVEDI
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತಾಧಿಕಾರಿ
ಐಸಿಎಆರ್ ಕ್ಯಾಂಪಸ್
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್
ರಾಮಗೊಂಡನಹಳ್ಳಿ
ಅಂಚೆ ಪೆಟ್ಟಿಗೆ ಸಂಖ್ಯೆ: 6450
ಯಲಹಂಕ
ಬೆಂಗಳೂರು-560064
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ