ಈಶಾನ್ಯ ಫ್ರಾಂಟಿಯರ್ ರೈಲ್ವೇಯಲ್ಲಿ (Northeast Frontier Railway) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ವಿವಿಧ 5636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್(Online)ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಜೂನ್ 30 ರವರೆಗೆ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆ: ಭಾರತೀಯ ರೈಲ್ವೆ
ಉದ್ಯೋಗ ರೈಲ್ವೆ ವಲಯ: ಈಶಾನ್ಯ ಗಡಿ ರೈಲ್ವೆ
ಹುದ್ದೆಗಳ ಹೆಸರು : ಅಪ್ರೆಂಟಿಸ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 5636
ವೇತನ: ರೈಲ್ವೆ ಇಲಾಖೆ ನಿಯಮ ಅನುಸಾರ
ಹುದ್ದೆ |
ಹುದ್ದೆ ಸಂಖ್ಯೆ |
ಕತಿಹಾರ್ ಟಿಡಿಎಚ್ ಕಾರ್ಯಾಗಾರ |
919 |
ಅಲಿಪುರ್ದೂರ್ |
512 |
ರಂಗಿಯಾ |
551 |
ಲುಮ್ಡಿಂಗ್ |
1140 |
ಟಿನ್ಸುಕಿಯಾ |
547 |
ಹೊಸ ಬೊಂಗೈಗಾಂವ್ ಕಾರ್ಯಾಗಾರ |
1110 |
ದಿಬ್ರುಗಢ್ ಕಾರ್ಯಾಗಾರ |
847 |
ವಿದ್ಯಾರ್ಹತೆ: ಅಭ್ಯರ್ಥಿಯು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಐಟಿಐ ವಿದ್ಯಾರ್ಹತೆ ಸರ್ಟಿಫಿಕೇಟ್ ಅನ್ನು ಎನ್ಸಿವಿಟಿ / ಎಸ್ಸಿವಿಟಿ ಇಂದ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್ನಲ್ಲಿ ಐಟಿಐ ಪಡೆದವರು, ಆಯಾ ಟ್ರೇಡ್ಗೆ ಅರ್ಜಿ ಹಾಕಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಗಳು 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಗರಿಷ್ಠ 24 ವರ್ಷಗಳನ್ನು ಪೂರ್ಣಗೊಳಿಸಿರಬಾರದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಆನ್ಲೈನ್
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಭರ್ತಿ ಮಾಡಬೇಕು.
ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಪೋಸ್ಟಲ್ ಆರ್ಡರ್ ಮೂಲಕ ಅಥವಾ ಆನ್ಲೈನ್ ಮೂಲಕ ಸಹ ಪಾವತಿ ಮಾಡಬಹುದು.
ಇದನ್ನು ಓದಿ: ಐಡಿಬಿಐ ಬ್ಯಾಂಕ್ನಲ್ಲಿ 1544 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ
ಎಸ್ಎಸ್ಎಲ್ಸಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ ಜೂನ್ 1, 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 30, 2022
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆಗೆ
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
nfr.indianrailways.gov.in.
ಇದನ್ನು ಓದಿ: ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ; ಬೇಗ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಕ್ಲಿಕ್ ಮಾಡಿ ಆನ್ಲೈನ್ನಲ್ಲಿ ಅನ್ವಯಿಸಿ -
ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. - ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ