• Home
  • »
  • News
  • »
  • jobs
  • »
  • NPCIL Recruitment: ಐಟಿಐ ಆಗಿದೆಯಾ? ಆನ್​ಲೈನ್ ನಲ್ಲಿ ಆರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

NPCIL Recruitment: ಐಟಿಐ ಆಗಿದೆಯಾ? ಆನ್​ಲೈನ್ ನಲ್ಲಿ ಆರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪದವೀಧರರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 

  • Share this:

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​​(Nuclear Power Corporation of India Limited)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 50 ಟ್ರೇಡ್​ ಅಪ್ರೆಂಟಿಸ್​ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಮೆರಿಟ್​​ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಾಳೆಯ ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್​ ಲೈನ್​ ಮತ್ತು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.


ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪದವೀಧರರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.   ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


ಸಂಸ್ಥೆಯ ಹೆಸರು: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL)
ಹುದ್ದೆಗಳ ಸಂಖ್ಯೆ: 50
ಉದ್ಯೋಗ ಸ್ಥಳ: ಬುಲಂದ್‌ಶಹರ್ , ಉತ್ತರ ಪ್ರದೇಶ
ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್
ಸ್ಟೈಪೆಂಡ್: 7,700-8,855 ರೂ  ಪ್ರತಿ ತಿಂಗಳು

ಹುದ್ದೆಹುದ್ದೆ ಸಂಖ್ಯೆ
ಫಿಟ್ಟರ್​25
ಎಲೆಕ್ಟ್ರಿಷಿಯನ್13
ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್12

ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI ಪೂರ್ಣಗೊಳಿಸಿರಬೇಕು.


ವಯೋಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ,  ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.


ವಯೋಮಿಡಿ ಸಡಿಲಿಕೆ
ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ ಅಭ್ಯರ್ಥಿಗಳು: 05 ವರ್ಷಗಳು
ವಿಕಲ ಚೇತನ ಅಭ್ಯರ್ಥಿಗಳು: 10 ವರ್ಷಗಳು


ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ ಮತ್ತು ಸಂದರ್ಶನ


ಇದನ್ನೂ ಓದಿ:  SSC Recruitment: 835 ಹೆಡ್ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ; ಬೇಗ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ವಿಧಾನ


ಆನ್​ಲೈನ್​ ಬಳಿಕ ಆಫ್​ಲೈನ್​


ಪ್ರಮುಖ ದಿನಾಂಕ


ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 27, 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಜೂನ್ 2022
ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 07 ಜುಲೈ 2022


 ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ತಿಳಿಯಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: npcilcareers.co.in


ಅರ್ಜಿ ಸಲ್ಲಿಕೆ ಪ್ರಕ್ರಿಯೆ


-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ


ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ನೀಡಿ.


-ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


ಇದನ್ನೂ ಓದಿ:  10 Lakh Recruitment: 18 ತಿಂಗಳಲ್ಲಿ 10 ಲಕ್ಷ ನೇಮಕಾತಿಗೆ ಮೋದಿ ಸೂಚನೆ


-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.


-ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ:


ಮ್ಯಾನೇಜರ್ (HRM), ನರೋರಾ ಅಟಾಮಿಕ್ ಪವರ್ ಸ್ಟೇಷನ್, ಪ್ಲಾಂಟ್ ಸೈಟ್, ನರೋರಾ, PO: NAPP ಟೌನ್‌ಶಿಪ್, ನರೋರಾ, ಬುಲಂದ್‌ಶಹರ್ - 203389

Published by:Mahmadrafik K
First published: