• Home
  • »
  • News
  • »
  • jobs
  • »
  • NPCIL Recruitment: 177 ಟ್ರೇಡ್​ ಅಪ್ರೆಂಟಿಸ್​ ಹುದ್ದೆಗೆ ನೇಮಕಾತಿ; ಐಟಿಐ ಆದವರಿಗೆ ಅವಕಾಶ

NPCIL Recruitment: 177 ಟ್ರೇಡ್​ ಅಪ್ರೆಂಟಿಸ್​ ಹುದ್ದೆಗೆ ನೇಮಕಾತಿ; ಐಟಿಐ ಆದವರಿಗೆ ಅವಕಾಶ

ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪದವೀಧರರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 

  • Share this:

    ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​​(Nuclear Power Corporation of India Limited)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, 50 ಟ್ರೇಡ್​ ಅಪ್ರೆಂಟಿಸ್​ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಮೆರಿಟ್​​ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 16 ಆಗಿದೆ. ಅರ್ಜಿಯನ್ನು ಆನ್​ ಲೈನ್​ ಮತ್ತು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.


    ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪದವೀಧರರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.   ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL)
    ಹುದ್ದೆಗಳ ಸಂಖ್ಯೆ: 50
    ಉದ್ಯೋಗ ಸ್ಥಳ: ಬುಲಂದ್‌ಶಹರ್ , ಉತ್ತರ ಪ್ರದೇಶ
    ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್
    ಸ್ಟೈಪೆಂಡ್: 7700-8855 ರೂ  ಪ್ರತಿ ತಿಂಗಳು

    ಹುದ್ದೆಹುದ್ದೆ ಸಂಖ್ಯೆ
    ಫಿಟ್ಟರ್​25
    ಎಲೆಕ್ಟ್ರಿಷಿಯನ್13
    ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್12

    ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI ಪೂರ್ಣಗೊಳಿಸಿರಬೇಕು.


    ವಯೋಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ,  ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.


    ವಯೋಮಿಡಿ ಸಡಿಲಿಕೆ
    ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು
    ಪರಿಶಿಷ್ಟ ಜಾತಿ ಅಭ್ಯರ್ಥಿಗಳು: 05 ವರ್ಷಗಳು
    ವಿಕಲ ಚೇತನ ಅಭ್ಯರ್ಥಿಗಳು: 10 ವರ್ಷಗಳು


    ಆಯ್ಕೆ ಪ್ರಕ್ರಿಯೆ
    ಮೆರಿಟ್ ಪಟ್ಟಿ ಮತ್ತು ಸಂದರ್ಶನ


    ಅರ್ಜಿ ಸಲ್ಲಿಕೆ ವಿಧಾನ


    ಆನ್​ಲೈನ್​ ಬಳಿಕ ಆಫ್​ಲೈನ್​


    ಇದನ್ನು ಓದಿ: ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ 61 ಹುದ್ದೆಗಳಿಗೆ ನೇಮಕಾತಿ


    ಪ್ರಮುಖ ದಿನಾಂಕ


    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 27, 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಜೂನ್ 2022
    ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 07 ಜುಲೈ 2022


     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ತಿಳಿಯಲು: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: npcilcareers.co.in


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ


    ಇದನ್ನು ಓದಿ: ಮೆಸ್ಕಾಂನಲ್ಲಿ 183 ಅಪ್ರೆಂಟಿಸ್​ ಹುದ್ದೆ; ಅರ್ಜಿ ಸಲ್ಲಿಕೆಗೆ ಜೂನ್​ 15 ಕಡೆಯ ದಿನ


    ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ನೀಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.


    -ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ:


    ಮ್ಯಾನೇಜರ್ (HRM), ನರೋರಾ ಅಟಾಮಿಕ್ ಪವರ್ ಸ್ಟೇಷನ್, ಪ್ಲಾಂಟ್ ಸೈಟ್, ನರೋರಾ, PO: NAPP ಟೌನ್‌ಶಿಪ್, ನರೋರಾ, ಬುಲಂದ್‌ಶಹರ್ - 203389

    Published by:Seema R
    First published: