• Home
 • »
 • News
 • »
 • jobs
 • »
 • NCS Recruitment: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನೇಮಕಾತಿ; ಯಾವುದೇ ಪದವಿ ಆಗಿದ್ರೂ ಅರ್ಜಿ ಸಲ್ಲಿಸಿ

NCS Recruitment: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನೇಮಕಾತಿ; ಯಾವುದೇ ಪದವಿ ಆಗಿದ್ರೂ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಒಪ್ಪಂದದ ಆಧಾರದ ಮೇಲೆ ದೇಶದ ಪದವೀಧರರ ಅಭ್ಯರ್ಥಿಗಳಿಂದ ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

 • Share this:

  ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು (Ministry of Labour and Employment) ರಾಷ್ಟ್ರೀಯ ವೃತ್ತಿ ಸೇವೆ (National Career Service- NCS) ಯೋಜನೆ ಅಡಿ 130 ಯಂಗ್​ ಪ್ರೊಫೇಶನಲ್​​ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜೂನ್​ 22 ಆಗಿದೆ.


  ಒಪ್ಪಂದದ ಆಧಾರದ ಮೇಲೆ ದೇಶದ ಪದವೀಧರರ ಅಭ್ಯರ್ಥಿಗಳಿಂದ ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಕೆಳಕಂಡಂತೆ ಇದೆ.

  ಹುದ್ದೆ ಮಾಹಿತಿಹುದ್ದೆ ವಿವರ
  ಸಂಸ್ಥೆಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ
  ಹುದ್ದೆಯಂಗ್​ ಪ್ರೊಫೇಶನಲ್​
  ಒಟ್ಟು ಹುದ್ದೆಗಳು130
  ವಿದ್ಯಾರ್ಹತೆಯಾವುದೇ ವಿಷಯದಲ್ಲಿ ಪದವಿ
  ಕಾರ್ಯ ನಿರ್ವಹಣೆ ಸ್ಥಳದೇಶಾದ್ಯಾಂತ
  ವೇತನ50000 ರೂ ಮಾಸಿಕ

  ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.


  ಪ್ರಮುಖ ಕೌಶಲ್ಯಗಳು:
  ಅನಾಲಿಟಿಕ್​, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಜ್ಞಾನ


  ಇದನ್ನು ಓದಿ: 177 ಟ್ರೇಡ್​ ಅಪ್ರೆಂಟಿಸ್​ ಹುದ್ದೆಗೆ ನೇಮಕಾತಿ; ಐಟಿಐ ಆದವರಿಗೆ ಅವಕಾಶ


  ಅನುಭವ
  ಸಂಬಂಧ ಪಟ್ಟ ಕ್ಷೇತ್ರದಲ್ಲಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅನುಭವ ಹೊಂದಿರಬೇಕು.


  ವಯೋಮಿತಿ: ಅಧಿಸೂಚನೆ ಅನ್ವಯ ಅಭ್ಯರ್ಥಿಯೂ 24 ವರ್ಷದಿಂದ 40 ವರ್ಷ ವಯೋಮಿತಿ ಒಳಗೆ ಇರಬೇಕು (8/6/1982 ಮತ್ತು 8/6/ 1998ರೊಳಗೆ ಜನಿಸಿರಬೇಕು)


  ವಯೋಮಿತಿ ಸಡಿಲಿಕೆ
  ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
  ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ
  ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ


  ಇದನ್ನು ಓದಿ: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ನೇಮಕಾತಿ; MBA, MSW ಆದವರಿಗೆ ಅವಕಾಶ


  ಅರ್ಜಿ ಸಲ್ಲಿಕೆ: ಆನ್​ಲೈನ್​


  ಪ್ರಮುಖ ದಿನಾಂಕ
  ಆನ್​ಲೈನ್​ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜೂನ್ 8, 2022
  ಆನ್​ಲೈನ್​ ಅರ್ಜಿ ಸ್ಲಿಸಲು ಕೊನೆಯ ದಿನಾಂಕ: ಜೂನ್​ 22, 2022


  ಅಧಿಸೂಚನೆ ಪ್ರಮುಖ ಲಿಂಕ್​​​ಗಳು
  ಅಧಿಕೃತ ಅಧಿಸೂಚನೆಗೆ ಇಲ್ಲಿ ಕ್ಲಿಕ್​ ಮಾಡಿ
  ಅಧಿಕೃತ ವೆಬ್​ಸೈಟ್​: https://www.ncs.gov.in/


  ಅರ್ಜಿ ಸಲ್ಲಿಕೆ ವಿಧಾನ


  -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


  ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


  ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

  Published by:Seema R
  First published: