NTPC Recruitment: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್​​ನಲ್ಲಿದೆ ಉದ್ಯೋಗ; ಡಿಪ್ಲೊಮಾ ಆಗಿದ್ರೆ ಅರ್ಜಿ ಸಲ್ಲಿಸಿ

ಭಾರತದ ಯಾವುದೇ ಮೂಲೆಯಲ್ಲಿ ಕೆಲಸ ನಿರ್ವಹಿಸುವ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ.

20 ಹುದ್ದೆಗೆ ಅರ್ಜಿ ಆಹ್ವಾನ

20 ಹುದ್ದೆಗೆ ಅರ್ಜಿ ಆಹ್ವಾನ

  • Share this:
    ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್​ ಲಿಮಿಟೆಡ್​​ನಲ್ಲಿ (National Thermal Power Corporation Limited) ಸಹಾಯಕ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಸಲಾಗಿದೆ. ಪರಿಸರ ನಿರ್ವಹಣೆ ವಿಭಾಗದಲ್ಲಿ 20 ಸಹಾಯಕ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಆಗಸ್ಟ್​ 26 ಆಗಿದೆ. ಅರ್ಜಿಯನ್ನು ಆನ್​ಲೈನ್ (Online) ಮೂಲಕ ಸಲ್ಲಿಸಬಹುದಾಗಿದೆ.

    ಭಾರತದ ಯಾವುದೇ ಮೂಲೆಯಲ್ಲಿ ಕೆಲಸ ನಿರ್ವಹಿಸುವ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಒಟ್ಟು 20 ಹುದ್ದೆಗಳು ಖಾಲಿ ಇದ್ದು, ಆನ್​ಲೈನ್​ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹುದ್ದೆ, ನೇಮಕಾತಿ ಪ್ರಕ್ರಿಯೆ, ಅಧಿಸೂಚನೆ ಪ್ರಕಟಣೆ ಕುರಿತ ವಿವರವಾದ ಮಾಹಿತಿ ಇಲ್ಲಿದೆ.



























    ಹುದ್ದೆ ಮಾಹಿತಿವಿವರ
    ಸಂಸ್ಥೆಯ ಹೆಸರುನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
    ಹುದ್ದೆಯ ಹೆಸರುಸಹಾಯಕ ಅಧಿಕಾರಿ (ರಕ್ಷಣೆ)
    ಹುದ್ದೆಗಳ ಸಂಖ್ಯೆ20
    ಉದ್ಯೋಗ ಸ್ಥಳಭಾರತದಾದ್ಯಂತ
    ವೇತನ30,000- 1,20,000

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ಪ್ರೊಡಕ್ಷನ್‌ನಲ್ಲಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿದೆ ಯುವ ವೃತ್ತಿಪರ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

    ವಯೋಮಿತಿ ಸಡಿಲಿಕೆ
    ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಅಭ್ಯರ್ಥಿಗಳು: 05 ವರ್ಷಗಳು
    ವಿಕಲ ಚೇತನರು ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ
    ಪ.ಜಾ, ಪ. ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: ಯಾವುದೇ ಶುಲ್ಕ ಇಲ್ಲ
    ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳು: ರೂ.300ರೂ

    ಪಾವತಿ ವಿಧಾನ: ಆನ್‌ಲೈನ್ ಮುಖಾಂತರ

    ಆಯ್ಕೆ ಪ್ರಕ್ರಿಯೆ:
    ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಆಗಸ್ಟ್​​ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ntpc.co.in

    ಇದನ್ನು ಓದಿ: ಅರ್ಥಶಾಸ್ತ್ರದಲ್ಲಿ ಎಂಎ ಆದವರಿಗೆ ಇದೆ ಉದ್ಯೋಗಾವಕಾಶ; ಮಾಸಿಕ 35,000 ರೂವರೆಗೆ ವೇತನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್​ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
    Published by:Seema R
    First published: