Nurse Job Alert: 56 ನರ್ಸ್​ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ SAIL; ಇಲ್ಲಿದೆ ಸಂಪೂರ್ಣ ಮಾಹಿತಿ

ಈ ಹುದ್ದೆಗಳು ತಾತ್ಕಾಲಿಕವಾಗಿದ್ದು, 18 ತಿಂಗಳ ಒಪ್ಪಂದ ಆಧಾರದ ಕೆಲಸವಾಗಿದೆ.

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

  • Share this:
    ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್​ನಲ್ಲಿ ನರ್ಸಿಂಗ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್ಸಿ ಅಥವಾ ಜನರಲ್​ ನರ್ಸಿಂಗ್​ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 56 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನರ್ಸಿಂಗ್​ ಉದ್ಯೋಗಾವಕಾಶ ಹುಡುಕುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್​ ಮೂಲಕ ಕಳುಹಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 9 ಆಗಿದೆ.

    ಪಶ್ಚಿಮ ಬಂಗಾಳದ ದರ್ಗಾಪುರದಲ್ಲಿರುವ 600 ಬೆಡ್​ಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲು ನರ್ಸಿಂಗ್​ ಅಭ್ಯರ್ಥಿಗಳ ನೇಮಕಾತಿಗೆ ಮುಂದಾಗಲಾಗಿದೆ. ಈ ಹುದ್ದೆಗಳು ತಾತ್ಕಾಲಿಕವಾಗಿದ್ದು, 18 ತಿಂಗಳ ಒಪ್ಪಂದ ಆಧಾರದ ಕೆಲಸವಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)
    ಹುದ್ದೆನರ್ಸ್​​
    ಹುದ್ದೆ ಸಂಖ್ಯೆ56
    ಕಾರ್ಯ ನಿರ್ವಹಣೆ ಸ್ಥಳದುರ್ಗಾಪುರ - ಪಶ್ಚಿಮ ಬಂಗಾಳ
    ಸ್ಟೈಪೆಂಡ್8000 ರೂ ಮಾಸಿ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿ, ಬಿಎಸ್ಸಿ ನರ್ಸಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

    ವಯೋಮಿತಿ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳನ್ನು ಮೀರಿರಬಾರದಯ.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

    ಇದನ್ನು ಓದಿ: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

    ಆಯ್ಕೆ ಪ್ರಕ್ರಿಯೆ
    ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 27 ಜುಲೈ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 29 ಆಗಸ್ಟ್ 2022
    ಸಂದರ್ಶನದ ದಿನಾಂಕ: 30ನೇ ಮತ್ತು 31 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: sail.co.in

    ನೇರ ಸಂದರ್ಶನ ನಡೆಯುವ ವಿಳಾಸ
    ಡಿಎಸ್​​ಪಿ ಮುಖ್ಯ ಆಸ್ಪತ್ರೆ, ಜೆಎಂ ಸೆಂಗುಪ್ತ ರಸ್ತೆ, ಬಿ-ವಲಯ, ದುರ್ಗಾಪುರ - 713205, ಪಶ್ಚಿಮ ಬಂಗಾಳ.

    ಇದನ್ನು ಓದಿ: ಮೈಸೂರಿನ ಜೆಎಸ್​ಎಸ್​ ಮಹಾವಿದ್ಯಾಪೀಠದಲ್ಲಿ ವಿವಿಧ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: