ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (Karnataka State Law University) ಕಚೇರಿ ಸೂಪರಿಂಟೆಂಡೆಂಟ್ (Office Superintendent) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಸಂದರ್ಶನದ ಮೂಲಕ ಈ ಹುದ್ದೆ ಆಯ್ಕೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 22 ಆಗಿದೆ.
ಈ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆ ಅವಧಿ 11 ತಿಂಗಳಾಗಿದ್ದು, ಈಗಾಗಲೇ ಸರ್ಕಾರದಲ್ಲಿ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆ ಮಾಹಿತಿ | ಹುದ್ದೆ ವಿವರ |
ವಿಶ್ವವಿದ್ಯಾಲಯದ ಹೆಸರು | ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ |
ಹುದ್ದೆ | ಕಚೇರಿ ಸೂಪರಿಂಟೆಂಡೆಂಟ್ |
ಹುದ್ದೆಗಳ ಸಂಖ್ಯೆ | 1 |
ಕಾರ್ಯ ನಿರ್ವಹಣೆ ಸ್ಥಳ | ಹುಬ್ಬಳ್ಳಿ |
ವೇತನ | 22790 ರೂ. ಪ್ರತಿ ತಿಂಗಳು |
ಅನುಭವದ ವಿವರಗಳು
ಅಭ್ಯರ್ಥಿಗಳು ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸಿರಬೇಕು ಮತ್ತು ಅಧೀಕ್ಷಕರಾಗಿ ಕೆಲಸ ಮಾಡಿರಬೇಕು.
ಇದನ್ನು ಓದಿ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವಾರ್ಡನ್ ಹುದ್ದೆಗೆ ಅಧಿಸೂಚನೆ
ವಯೋಮಿತಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಸಂದರ್ಶನ
ಅರ್ಜಿ ಸಲ್ಲಿಕೆ: ಆಫ್ಲೈನ್
ಪ್ರಮುಖ ದಿನಾಂಕ
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಜುಲೈ 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: kslu.karnataka.gov.in
ಇದನ್ನು ಓದಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಯುವ ವೃತ್ತಿಪರರ ಹುದ್ದೆ; ತಿಂಗಳಿಗೆ 30 ಸಾವಿರ ರೂ ವೇತನ
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
-ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ನಮೂದಿಸಿ
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಈ ಕೆಳಗಿನ ವಿಳಾಸಕ್ಕೆ ಅಂಚೆ, ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬೇಕು
ಅಧೀನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ, ಹುಬ್ಬಳ್ಳಿ-580025
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ