Oil India Limited Recruitment 2021: ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000 ರಿಂದ 90,000ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Jobs

Jobs

  • Share this:
    ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಲು ತಿಳಿಸಿದೆ. ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಪಿಯುಸಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ:  ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ: ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 26,000 ರಿಂದ 90,000ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಹೇಗೆ: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಅರ್ಜಿದಾರರು 200ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮೂಲಕ  http://oil-india.com/ ವೆಬ್​ಸೈಟ್​​ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 15,2021ರೊಳಗೆ ಅರ್ಜಿ ಸಲ್ಲಿಸಬೇಕು.
    Published by:Harshith AS
    First published: