Oil India Recruitment 2021: ಆಯಿಲ್ ಇಂಡಿಯಾ(Oil India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 146 ಗ್ರೇಡ್-7(Grade-7) ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಸ್ಸಾಂನ ದಿಬ್ರುಗಢ್, ತಿನ್ಸುಕಿಯಾ, ಶಿವಸಾಗರ್ ಮತ್ತು ಚರೈಡಿಯೊ ಮತ್ತು ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಗಳಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್, ಫೀಲ್ಡ್ ಹೆಡ್ಜಾಂಟರ್ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಹೊರಡಿಸಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಆಯಿಲ್ ಇಂಡಿಯಾ |
ಹುದ್ದೆಯ ಹೆಸರು |
ಗ್ರೇಡ್-7 |
ಒಟ್ಟು ಹುದ್ದೆಗಳು |
146 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
10/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
9/12/2021 |
ಆಯ್ಕೆ ಪ್ರಕ್ರಿಯೆ ವಿಧಾನ |
ಕಂಪ್ಯೂಟರ್ ಆಧಾರಿತ ಪರೀಕ್ಷೆ |
ಇದನ್ನೂ ಓದಿ: SAIL Recruitment 2021: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 38 ಶಿಕ್ಷಕ ಹುದ್ದೆಗಳು ಖಾಲಿ; ನೇರ ಸಂದರ್ಶನ
ಅರ್ಜಿ ಶುಲ್ಕ:
ಗ್ರೇಡ್-7 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು.
SC/ST/PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವಯೋಮಿತಿ:
ಗ್ರೇಡ್-7 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-35 ವರ್ಷದೊಳಗಿರಬೇಕು.
ವಿದ್ಯಾರ್ಹತೆ:
ಗ್ರೇಡ್-7 ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ:India Railway Recruitment 2021: SSLC, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ