ONGC Recruitment 2021: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ(Oil and Natural Gas Corporation -ONGC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 7 ಜೂನಿಯರ್ ಕನ್ಸಲ್ಟೆಂಟ್(Junior Consultant) ಮತ್ತು ಅಸೋಸಿಯೇಟ್ ಕನ್ಸಲ್ಟೆಂಟ್(Associate Consultant) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.ongcindia.com ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ |
ಹುದ್ದೆಯ ಹೆಸರು |
ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ |
ಒಟ್ಟು ಹುದ್ದೆಗಳು |
07 |
ವಯೋಮಿತಿ |
65 ವರ್ಷದೊಳಗಿನ ನಿವೃತ್ತಿ ಹೊಂದಿದ ಅಭ್ಯರ್ಥಿ |
ಉದ್ಯೋಗದ ಸ್ಥಳ |
ನವದೆಹಲಿ |
ಸಂಬಳ |
ಮಾಸಿಕ ₹40,000-66,000 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
23/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
08/11/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/10/2021
ಅರ್ಜಿಯನ್ನು karmakar_somnath@ongc.co.in ಗೆ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/11/2021
ಇದನ್ನೂ ಓದಿ:IOCL Recruitment 2021: ಇಂಡಿಯಲ್ ಆಯಿಲ್ ಕಾರ್ಪೋರೇಷನ್ನಲ್ಲಿ 1968 ಅಪ್ರೆಂಟಿಸ್ ಹುದ್ದೆಗಳು ಖಾಲಿ
ಅರ್ಹತೆ:
E3-E6 ಮಟ್ಟದಲ್ಲಿ ನಿವೃತ್ತ ONGC ವ್ಯಕ್ತಿಗಳು ವರ್ಕ್ಓವರ್/ಡ್ರಿಲ್ಲಿಂಗ್ ಕಾರ್ಯಾಚರಣೆಗಳಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
ಜೂನಿಯರ್ ಕನ್ಸಲ್ಟೆಂಟ್ ಮತ್ತು ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 65 ವರ್ಷದೊಳಗಿನವರಾಗಿರಬೇಕು.
ಇದನ್ನೂ ಓದಿ:ONGC Recruitment 2021: BE, B. Tech ಪದವೀಧರರಿಗೆ ಒಎನ್ಜಿಸಿಯಲ್ಲಿ ಉದ್ಯೋಗ, ಅರ್ಜಿ ಹಾಕಲು ಹೀಗೆ ಮಾಡಿ
ಸಂಬಳ:
ಜೂನಿಯರ್ ಕನ್ಸಲ್ಟೆಂಟ್- ಮಾಸಿಕ ₹ 40,000
ಅಸೋಸಿಯೇಟ್ ಕನ್ಸಲ್ಟೆಂಟ್-ಮಾಸಿಕ ₹ 66,000
ಆಯ್ಕೆ ಪ್ರಕ್ರಿಯೆ:
- ದಾಖಲಾತಿ ಪರಿಶೀಲನೆ
- ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ