ONGC Recruitment: ಒಎನ್​ಜಿಸಿಯಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಹುದ್ದೆ ಸಂಪೂರ್ಣ ಮಾಹಿತಿ

ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಅವಕಾಶ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

 • Share this:
  ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (Oil and Natural Gas Corporation Limited) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಾರ್ಟರ್ಡ್​ ಅಕೌಂಟೆಂಟ್​, ಕಾಸ್ಟ್​ ಅಕೌಂಟೆಂಟ್ (Chartered Accountant, Cost Accountant)​ ಸೇರಿದಂತೆ ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಅವಕಾಶ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

  ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. 12 ತಿಂಗಳ ಅವಧಿಗೆ ಈ ನೇಮಕಾತಿ ನಡೆಯಲಿದೆ.

  ಸಂಸ್ಥೆಯ ಹೆಸರು: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
  ಹುದ್ದೆಯ ಹೆಸರು: ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್
  ಹುದ್ದೆಗಳ ಸಂಖ್ಯೆ: 50
  ಉದ್ಯೋಗ ಸ್ಥಳ: ಅಖಿಲ ಭಾರತ
  ಸ್ಟೈಪೆಂಡ್: 15000 ರೂ. ಪ್ರತಿ ತಿಂಗಳು


  ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
  ಚಾರ್ಟರ್ಡ್ ಅಕೌಂಟೆಂಟ್25ಸಿಇ (ಇಂಟರ್​)
  ಕಾಸ್ಟ್ ಅಕೌಂಟೆಂಟ್25ಸಿಇ (ಇಂಟರ್​)

  ವಯಸ್ಸಿನ ಮಿತಿ:  ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು 1 ಜನವರಿ 1998 ಅಥವಾ ನಂತರ ಜನಿಸಿದವರಾಗಿರಬೇಕು.

  ಇದನ್ನು ಓದಿ: ಭಾರತೀಯ ಸೇನೆಯಲ್ಲಿ 3068 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಎಸ್​ಎಸ್​ಎಲ್​ಸಿ ಆಗಿದ್ರೆ ಸಾಕು

  ಅರ್ಜಿ ಸಲ್ಲಿಕೆ: ಆನ್​ಲೈನ್​

  ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

  ಆಯ್ಕೆ ಪ್ರಕ್ರಿಯೆ:
  ಸ್ಕ್ರೀನಿಂಗ್ ಮತ್ತು ಸಂದರ್ಶನ

  ಪ್ರಮುಖ ದಿನಾಂಕಗಳು:
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಸೆಪ್ಟೆಂಬರ್​ 2022
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​​ 2022

   ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ - ಕಾಸ್ಟ್ ಅಕೌಂಟೆಂಟ್: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ಅಧಿಸೂಚನೆ - ಚಾರ್ಟರ್ಡ್ ಅಕೌಂಟೆಂಟ್: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: ongcindia.com

  ಇದನ್ನು ಓದಿ: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟ: ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

  ಅರ್ಜಿ ಸಲ್ಲಿಕೆ ಪ್ರಕ್ರಿಯೆ

  -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

  -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

  -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
  Published by:Seema R
  First published: