ONGC Recruitment 2022: 871ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಒಎನ್​ಜಿಸಿ; ಬಿಇ ಆದವರಿಗೆ ಅವಕಾಶ

ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ.

ONGC

ONGC

  • Share this:
    ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (Oil and Natural Gas Corporation) 871 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಇಇ, ಪ್ರೋಗ್ರಾಮಿಂಗ್​ ಆಫೀಸರ್​ (AEE and Programing Officer) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಖಿಲ ಭಾರತ ಮಟ್ಟದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
    ಹುದ್ದೆಯ ಹೆಸರುಎಇಇ, ಪ್ರೋಗ್ರಾಮಿಂಗ್ ಆಫೀಸರ್
    ಹುದ್ದೆಗಳ ಸಂಖ್ಯೆ871
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ60000-180000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ, ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

    ವಯೋಮಿತಿ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಯು ಕನಿಷ್ಟ 18 ಮತ್ತು ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ, ಮಾಜಿ ಸೈನಿಕ ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ದಾವಣಗೆರೆ ವಿವಿಯಲ್ಲಿ ಎಫ್​ಡಿಎ ಸೇರಿ ಹಲವು ಹುದ್ದೆ ನೇಮಕಾತಿ

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 300 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ, ಗೇಟ್-2022 ಅಂಕಗಳು ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಅಕ್ಟೋಬರ್ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ongcindia.com

    ಇದನ್ನು ಓದಿ: ಏರ್​ ಇಂಡಿಯಾದಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ 

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್,

    ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: