PU Exam Cancel: ಪಿಯುಸಿ ಎಕ್ಸಾಂ ಇಲ್ಲದಿದ್ರೇನಾಯ್ತು, CET ಇದ್ದೇ ಇರುತ್ತೆ; ಎಂಜಿನಿಯರಿಂಗ್, ಮೆಡಿಕಲ್ ಸೇರಬೇಕಾದವ್ರು ಗಮನಿಸಿ

ಪಿಯುಸಿ ಪರೀಕ್ಷೆ ರದ್ದಾಗಿದ್ದು, ಎಲ್ಲರೂ ಪಾಸ್ ಆಗಿದ್ದಾರೆ. ಪಿಯುಸಿ ನಂತರ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸೀಟ್ ಪಡೆಯಲು ಕನಿಷ್ಠ ಅಂಕ ಬೇಕು. ಅದಕ್ಕಾಗಿ ಸಿಇಟಿ ಪರೀಕ್ಷೆಯೇ ಮಾನದಂಡ-ಡಿಸಿಎಂ ಅಶ್ವತ್ಥ ನಾರಾಯಣ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
    ಬೆಂಗಳೂರು(ಜೂ.05): ಕೊರೋನಾ ಕಾರಣದಿಂದಾಗಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು, ಗ್ರೇಡಿಂಗ್ ಫಲಿತಾಂಶವನ್ನು ನೀಡುವುದಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಹೇಳಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿಲ್ಲದ ಕಾರಣ, ವೃತ್ತಿಪರ ಕೋರ್ಸ್​​ಗಳಿಗೆ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆಯೇ ಮಾನದಂಡ ಎನ್ನಲಾಗುತ್ತಿದೆ. ಈ ಮೊದಲು ಶೇ.50 ರಷ್ಟು ಪಿಯುಸಿ ಅಂಕ ಹಾಗೂ ಶೇ.50ರಷ್ಟು ಸಿಇಟಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ನೀಡಲಾಗುತ್ತಿತ್ತು. ಆದರೆ ಈ ಬಾರಿ ಎಕ್ಸಾಂ ನಡೆಯದ ಕಾರಣ ಮೆಡಿಕಲ್, ಎಂಜಿನಿಯರಿಂಗ್ ಕೋರ್ಸ್​​ಗಳಿಗೆ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆಯೇ ಮುಖ್ಯ ಮಾನದಂಡ ಆಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ,  ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ರದ್ದಾಗಿದ್ದು, ಎಲ್ಲರೂ ಪಾಸ್ ಆಗಿದ್ದಾರೆ. ಪಿಯುಸಿ ನಂತರ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸೀಟ್ ಪಡೆಯಲು ಕನಿಷ್ಠ ಅಂಕ ಬೇಕು. ಅದಕ್ಕಾಗಿ ಸಿಇಟಿ ಪರೀಕ್ಷೆಯೇ ಮಾನದಂಡ. ಸಿಇಟಿ ಮೂಲಕ ಬರುವ ಅಂಕದ ಆಧಾರದ ಮೇಲೆ ಮೆಡಿಕಲ್, ಡೆಂಟಲ್ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

    ಇದನ್ನೂ ಓದಿ:Health Tips: ತೂಕ ಇಳಿಸಿಕೊಳ್ಳೋ ಐಡಿಯಾ ಇದೆಯಾ?; ಹಾಗಿದ್ರೆ ಈ ಫುಡ್ ಬೆಸ್ಟ್...!

    ದ್ವಿತೀಯ ಪಿಯುಸಿಗೆ ಪರೀಕ್ಷೆ ಆಗಿರದ‌ ಕಾರಣ,  ಮೆಡಿಕಲ್, ಎಂಜಿನಿಯರಿಂಗ್ ಸೀಟ್ ಪಡೆಯಲು ಪರೀಕ್ಷೆ ಆಗಬೇಕು. ಅದಕ್ಕೆ ಕನಿಷ್ಠ ಪರೀಕ್ಷೆ ಅಂಕ ಬೇಕು. ಹೀಗಾಗಿ ಸಿಇಟಿ ಮೂಲಕ ಪರೀಕ್ಷೆ ಮಾಡಲಾಗುವುದು. ಸಂಬಂಧಿಸಿದ ಅಧಿಕಾರಿಗಳ ಸಭೆ ಮಾಡಿ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಪರೀಕ್ಷೆ ಇಲ್ಲದೆ ಪಾಸ್ ಅಂತ ಮಾಡಬಹುದಿತ್ತು. ಆದ್ರೆ ಮುಂದೆ ಅವರಿಗೆ ತೊಂದರೆಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದಿಂದ ಪರೀಕ್ಷೆ ಮಾಡಲಾಗುತ್ತದೆ ಎಂದರು.

    ಮುಂದುವರೆದ ಅವರು, ಸಚಿವರಾದ ಸುರೇಶ ಕುಮಾರ್ ಅವರು ಒಂದು ಒಳ್ಳೆಯ ಸಲಹೆ ಕೊಟ್ಟಿದ್ದಾರೆ. ಮೆಡಿಕಲ್ ಮತ್ತು ಎಂಜಿನಿಯರಿಂಗ್ ಸೀಟ್ ಆಯ್ಕೆ ಮಾಡಬೇಕಾದರೆ ಕನಿಷ್ಠ ಮಾರ್ಕ್ಸ್ ಇತ್ತು.  ಕನಿಷ್ಠ ಅಂಕಗಳಿಗೆ ಈಗ ಅಡಚಣೆ ಆಗೋದು ಬೇಡ.  ಸಿಇಟಿ ಮಾರ್ಕ್ಸ್ ಮಾತ್ರ ಪರಿಗಣನೆ ಆಗಲಿ ಎಂದಿದ್ದಾರೆ. ಸಿಇಟಿ ಆಧಾರದ ಮೇಲೆ ಆಯ್ಕೆ ಆಗಲಿ ಅಂತ ಹೇಳಿದ್ದಾರೆ.  ಆ ದಿಕ್ಕಿನಲ್ಲಿ ಸಿಎಂ ಜೊತೆಗೆ ಚರ್ಚೆ ಮಾಡುತ್ತೇವೆ. ಇದಕ್ಕೆ ಕೆಲವು ತಿದ್ದುಪಡಿ ತರಬೇಕಾಗುತ್ತದೆ. ಆ ನಿಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.

    ಇದನ್ನೂ ಓದಿ:Corona Vaccine: ಸಿಹಿ ಸುದ್ದಿ- ಈ ವರ್ಷದೊಳಗೆ ಭಾರತಕ್ಕೆ ಬರಲಿವೆ ಇನ್ನೂ 4 ಹೊಸ ಕೊರೋನಾ ಲಸಿಕೆಗಳು

    ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕವನ್ನು ಪರಿಗಣಿಸಿ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಡಿಸಿಎಂ ಅಶ್ವತ್ಥನಾರಾಯಣಗೆ ಮನವಿ ಮಾಡಿದ್ದರು.  ವೃತ್ತಿಪರ‌ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ  ಪಿಯು ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು  ಕೈಬಿಡಿ.  ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರಾಂಕಿಂಗ್ ಗೆ ಪರಿಗಣಿಸಿ ಎಂದು ವಿನಂತಿಸಿದ್ದರು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
    Published by:Latha CG
    First published: