• Home
  • »
  • News
  • »
  • jobs
  • »
  • ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ 31,000 ಸಂಬಳದ ಉದ್ಯೋಗ

ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ 31,000 ಸಂಬಳದ ಉದ್ಯೋಗ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ quic-job@rri.res.in ಗೆ ಕಳುಹಿಸಬೇಕು.

  • Share this:

RRI Recruitment 2023: ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆ(Raman Research Institute) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಜೂನಿಯರ್ ರಿಸರ್ಚ್​ ಫೆಲೋ(JRF) ಹುದ್ದೆಗಳು ಖಾಲಿ ಇದ್ದು, ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 14 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​​ಸೈಟ್ www.rri.res.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆ
ಹುದ್ದೆಜೂನಿಯರ್ ರಿಸರ್ಚ್​ ಫೆಲೋ
ಒಟ್ಟು ಹುದ್ದೆ2
ವೇತನಮಾಸಿಕ 31,000 ರೂ.
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 17, 2023

ವಿದ್ಯಾರ್ಹತೆ:
ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 17, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Indian Navy: ಭಾರತೀಯ ನೌಕಾಪಡೆಯಲ್ಲಿ 70 SSC ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ವೇತನ:
ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 31,000 ವೇತನ ನೀಡಲಾಗುತ್ತದೆ.


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ quic-job@rri.res.in ಗೆ ಕಳುಹಿಸಬೇಕು.




ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 14/01/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 17, 2023

Published by:Latha CG
First published: