• Home
  • »
  • News
  • »
  • jobs
  • »
  • IIIT ಧಾರವಾಡದಲ್ಲಿ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ

IIIT ಧಾರವಾಡದಲ್ಲಿ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಫೆಬ್ರವರಿ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಅಷ್ಟರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.

  • News18 Kannada
  • 4-MIN READ
  • Last Updated :
  • Dharwad, India
  • Share this:

IIIT Dharwad Recruitment 2023: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ(Indian Institute of Information Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಜೂನಿಯರ್ ರಿಸರ್ಚ್​ ಫೆಲೋ (Junior Research Fellow- JRF) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಅಷ್ಟರೊಳಗೆ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ
ಹುದ್ದೆಜೂನಿಯರ್ ರಿಸರ್ಚ್​ ಫೆಲೋ
ವಿದ್ಯಾರ್ಹತೆಬಿಇ/ಬಿ.ಟೆಕ್
ವೇತನಮಾಸಿಕ ₹ 31,000
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
ಉದ್ಯೋಗದ ಸ್ಥಳಧಾರವಾಡ
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 7, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಇನ್ಫರ್ಮೇಶನ್ ಟೆಕ್ನಾಲಜಿಯಲ್ಲಿ ಎಂ.ಟೆಕ್, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: JOBS: ಕರ್ನಾಟಕದ ಈ ಜಿಲ್ಲೆಯಲ್ಲಿ 25 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 2.18 ಲಕ್ಷ ಸಂಬಳ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ಮಾಸಿಕ 31,000


ಉದ್ಯೋಗದ ಸ್ಥಳ:
ಧಾರವಾಡ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jagadishdn@iiitwd.ac.in ಗೆ ಕಳುಹಿಸಬೇಕು.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 23/01/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 7, 2023

Published by:Latha CG
First published: