• Home
  • »
  • News
  • »
  • jobs
  • »
  • JOBS: ತಿಂಗಳಿಗೆ 25,000 ಸಂಬಳ- ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗೆ ಈಗಲೇ ಅರ್ಜಿ ಹಾಕಿ

JOBS: ತಿಂಗಳಿಗೆ 25,000 ಸಂಬಳ- ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗೆ ಈಗಲೇ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

  • News18 Kannada
  • Last Updated :
  • Bangalore [Bangalore], India
  • Share this:

NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಲ್ಯಾಬೋರೇಟರಿ ಟೆಕ್ನಿಷಿಯನ್(Laboratory Technician) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಿಮ್ಹಾನ್ಸ್​
ಹುದ್ದೆಲ್ಯಾಬೋರೇಟರಿ ಟೆಕ್ನಿಷಿಯನ್
ಒಟ್ಟು ಹುದ್ದೆ1
ವೇತನಮಾಸಿಕ  ₹  25,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 25, 2023


ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಎಂಎಲ್​ಟಿ, ಡಿಪ್ಲೋಮಾ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಬೆಂಗಳೂರಿನಲ್ಲಿ BE/ B. Tech ಪದವೀಧರರಿಗೆ ಬಂಪರ್ ಉದ್ಯೋಗ- 90,000 ಸಂಬಳ


ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 25,000


ಉದ್ಯೋಗದ ಸ್ಥಳ
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 25, 2023

Published by:Latha CG
First published: