• Home
  • »
  • News
  • »
  • jobs
  • »
  • JOBS: ತಿಂಗಳಿಗೆ 1.40 ಲಕ್ಷ ಸಂಬಳ- ಪದವೀಧರರಿಗೆ ಇಲ್ಲಿದೆ ಬಂಪರ್ ಉದ್ಯೋಗ

JOBS: ತಿಂಗಳಿಗೆ 1.40 ಲಕ್ಷ ಸಂಬಳ- ಪದವೀಧರರಿಗೆ ಇಲ್ಲಿದೆ ಬಂಪರ್ ಉದ್ಯೋಗ

ನವಮಂಗಳೂರು ಪೋರ್ಟ್

ನವಮಂಗಳೂರು ಪೋರ್ಟ್

ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್(Offline)​ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.

  • Share this:

NMPT Recruitment 2023: ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್ ಇದೆ. ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ​ಒಟ್ಟು 2 ಅಸಿಸ್ಟೆಂಟ್ ಸೆಕ್ರೆಟರಿ(Assistant Secretary) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ (Mangalore) ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್(Offline)​ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನವ ಮಂಗಳೂರು ಬಂದರು ಟ್ರಸ್ಟ್
ಹುದ್ದೆಅಸಿಸ್ಟೆಂಟ್ ಸೆಕ್ರೆಟರಿ
ಒಟ್ಟು ಹುದ್ದೆ2
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 40,000-1,40,000
ಉದ್ಯೋಗದ ಸ್ಥಳಮಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 13, 2023

ಶೈಕ್ಷಣಿಕ ಅರ್ಹತೆ:


ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.


ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Job Alert: ತಿಂಗಳಿಗೆ 20 ಲಕ್ಷ ಸಂಬಳ- ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ


ವೇತನ:
ಮಾಸಿಕ ₹ 40,000-1,40,000


ಉದ್ಯೋಗದ ಸ್ಥಳ:
ಮಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 13, 2023

Published by:Latha CG
First published: