• Home
  • »
  • News
  • »
  • jobs
  • »
  • JOB ALERT: ಡಿಗ್ರಿ ಪಾಸಾದವರಿಗೆ ಮಂಗಳೂರಿನಲ್ಲಿ ಬಂಪರ್ ಉದ್ಯೋಗ- ತಿಂಗಳಿಗೆ 70 ಸಾವಿರ ಸಂಬಳ

JOB ALERT: ಡಿಗ್ರಿ ಪಾಸಾದವರಿಗೆ ಮಂಗಳೂರಿನಲ್ಲಿ ಬಂಪರ್ ಉದ್ಯೋಗ- ತಿಂಗಳಿಗೆ 70 ಸಾವಿರ ಸಂಬಳ

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ಒಟ್ಟು 8 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿ(Mangalore)ನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ.

  • News18 Kannada
  • 4-MIN READ
  • Last Updated :
  • Mangalore, India
  • Share this:

NMPT Recruitment 2023: ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್ ಇದೆ. ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ​ಒಟ್ಟು 8 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿ(Mangalore)ನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಫೆಬ್ರವರಿ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್(Offline)​ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

 ಸಂಸ್ಥೆ ನವ ಮಂಗಳೂರು ಬಂದರು ಟ್ರಸ್ಟ್
 ಹುದ್ದೆ ಜೂನಿಯರ್ ಅಸಿಸ್ಟೆಂಟ್
 ಒಟ್ಟು ಹುದ್ದೆ 8
 ವಿದ್ಯಾರ್ಹತೆ ಪದವಿ
 ವೇತನ ಮಾಸಿಕ 27,400-70,500
 ಉದ್ಯೋಗದ ಸ್ಥಳ ಮಂಗಳೂರು
 ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 20, 2023

ಶೈಕ್ಷಣಿಕ ಅರ್ಹತೆ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.


ಇದನ್ನೂ ಓದಿ: JOBS: ಎಂಜಿನಿಯರಿಂಗ್ ಪಾಸಾದವರಿಗೆ ಲಕ್ಷಗಟ್ಟಲೇ ಸಂಬಳದ ಉದ್ಯೋಗ- ಈಗಲೇ Apply ಮಾಡಿ


ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ 27,400-70,500


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ




ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 20, 2023

Published by:Latha CG
First published: