• Home
  • »
  • News
  • »
  • jobs
  • »
  • Government Job: ಜಲ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ ₹ 45,000

Government Job: ಜಲ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ ₹ 45,000

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಸಲ್ಲಿಸಲು ಫೆಬ್ರವರಿ 12, 2023 ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​(Online) ಮೂಲಕ ಅರ್ಜಿ ಹಾಕಿ.

  • News18 Kannada
  • 3-MIN READ
  • Last Updated :
  • New Delhi, India
  • Share this:

SJVN Recruitment 2023: ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ (Satluj Jal Vidyut Nigam Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 105 ಜೂನಿಯರ್ ಫೀಲ್ಡ್​ ಎಂಜಿನಿಯರ್(Junior Field Engineer), ಜೂನಿಯರ್ ಫೀಲ್ಡ್​ ಆಫೀಸರ್(Junior Field Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಫೆಬ್ರವರಿ 12, 2023 ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​(Online) ಮೂಲಕ ಅರ್ಜಿ ಹಾಕಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್
ಹುದ್ದೆಜೂನಿಯರ್ ಫೀಲ್ಡ್​ ಎಂಜಿನಿಯರ್, ಜೂನಿಯರ್ ಫೀಲ್ಡ್​ ಆಫೀಸರ್
ಒಟ್ಟು ಹುದ್ದೆ105
ವಿದ್ಯಾರ್ಹತೆಡಿಪ್ಲೊಮಾ, ಸಿಎ, ಪದವಿ
ವೇತನಮಾಸಿಕ 45,000 ರೂ.
ಉದ್ಯೋಗದ ಸ್ಥಳಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 12,  2023


ಹುದ್ದೆಯ ಮಾಹಿತಿ:
ಜೂನಿಯರ್ ಫೀಲ್ಡ್ ಎಂಜಿನಿಯರ್- 85
ಜೂನಿಯರ್ ಫೀಲ್ಡ್ ಆಫೀಸರ್- 20


ವಿದ್ಯಾರ್ಹತೆ:
ಜೂನಿಯರ್ ಫೀಲ್ಡ್ ಎಂಜಿನಿಯರ್- ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​ನಲ್ಲಿ ಡಿಪ್ಲೋಮಾ
ಜೂನಿಯರ್ ಫೀಲ್ಡ್ ಆಫೀಸರ್- ಸಿಎ/ ICWA (ಇಂಟರ್), CMA (ಇಂಟರ್), ಪದವಿ, ಸ್ನಾತಕೋತ್ತರ ಪದವಿ


ಇದನ್ನೂ ಓದಿ: Koppal: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ


ವಯೋಮಿತಿ:
ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 12, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ತಿಗಳು- 10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ


ವೇತನ:
ಮಾಸಿಕ 45,000 ರೂ.




ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ


ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 300 ರೂ.
ಪಾವತಿಸುವ ಬಗೆ- ಆನ್​ಲೈನ್​


ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಸಂದರ್ಶನ


ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 12, 2023

Published by:Latha CG
First published: