UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪಲ್ಸ್ ಟೆಕ್ನಾಲಜಿ ಏಜೆಂಟ್(Pulse Technology Agent) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಧಾರವಾಡದಲ್ಲಿ ಉದ್ಯೋಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಇದೇ ಡಿಸೆಂಬರ್ 29ರಂದು ಬೆಳಗ್ಗೆ 10.30 ಕ್ಕೆ ಸಂದರ್ಶನ(Walk-In-Interview) ನಡೆಯಲಿದ್ದು, ಆಸಕ್ತರು ಪಾಳ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ |
ಹುದ್ದೆ | ಪಲ್ಸ್ ಟೆಕ್ನಾಲಜಿ ಏಜೆಂಟ್ |
ಒಟ್ಟು ಹುದ್ದೆ | 1 |
ವೇತನ | ತಿಂಗಳಿಗೆ 10,000 |
ಉದ್ಯೋಗದ ಸ್ಥಳ | ಧಾರವಾಡ |
ವೇತನ:
ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಪಲ್ಸ್ ಟೆಕ್ನಾಲಜಿ ಏಜೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 10,000 ಸಂಬಳ ಕೊಡಲಾಗುತ್ತದೆ.
ಇದನ್ನೂ ಓದಿ: NCBS Recruitment 2022: ಈ ಸರ್ಕಾರಿ ಕೆಲಸಕ್ಕೆ ಡಿ.31ರೊಳಗೆ ಅರ್ಜಿ ಹಾಕಿ-ಬೆಂಗಳೂರಿನಲ್ಲಿ ಪೋಸ್ಟಿಂಗ್
ಸಂದರ್ಶನ ನಡೆಯುವ ಸ್ಥಳ:
ವಿಸ್ತರಣಾ ನಿರ್ದೇಶನಾಲಯ
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ
ಪ್ರಮುಖ ದಿನಾಂಕಗಳು
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 15/12/2022
ಸಂದರ್ಶನ ನಡೆಯುವ ದಿನಾಂಕ: 29/12/2022 ಬೆಳಗ್ಗೆ 10.30ಕ್ಕೆ
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಪ್ರತಿಗಳನ್ನು ತರಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ